Wednesday, September 30, 2026

BDA Apartments

ಪುಷ್ಪಾರ್ಚನೆ ಮೂಲಕ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಸಿಎಂ ...
Home Front Page ಆಷಾಢ ಶುಕ್ರವಾರ: ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಆಷಾಢ ಶುಕ್ರವಾರ: ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ- ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು ಜುಲೈ, 1,2026 (www.justkannada.in): ಆಷಾಢ ಶುಕ್ರವಾರದ ಮಾಸದಲ್ಲಿ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ  ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ ಶುಕ್ರವಾರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿದರು. ಆಷಾಢ ಮಾಸದಲ್ಲಿ ದರ್ಶನಕ್ಕೆ ಬರುವ ಭಕ್ತರ ಸುರಕ್ಷತೆ ಹೆಚ್ಚಿನ ಆಧ್ಯತೆ ನೀಡಬೇಕು. ಯಾವುದೇ ಕಾಲ್ತುಳಿತ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜುಲೈ 17 ರಂದು ಮೊದಲ ಆಷಾಡ ಶುಕ್ರವಾರ, ಜುಲೈ 24 ರಂದು 2 ನೇ ಆಷಾಡ ಶುಕ್ರವಾರ, ಜುಲೈ 31 ರಂದು 3 ನೇ ಆಷಾಡ ಶುಕ್ರವಾರ, ಆಗಸ್ಟ್ 04 ರಂದು ಅಮ್ಮನವರ ಜನ್ಮೋತ್ಸವ, ಆಗಸ್ಟ್ 07 ರಂದು 4 ನೇ ಆಷಾಡ ಶುಕ್ರವಾರ ನಡೆಯುತ್ತದೆ.

ಪೋಲಿಸ್ ಇಲಾಖೆಯ ವತಿಯಿಂದ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಆಷಾಡ ಶುಕ್ರವಾರ ದಿನಗಳಂದು ಬೆಳಗ್ಗೆ 5.30 ರಿಂದ ದೇವಾಲಯ ಮುಚ್ಚುವವರೆಗೆ ದರ್ಶನದ ವ್ಯವಸ್ಥೆ ಕಲ್ಪಿಸಬೇಕು. ಅಮ್ಮನವರ ಜನ್ಮೋತ್ಸವ ದಿವಸ ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕ ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಮಾಡಲಾಗುವುದು. ವಿಐಪಿ ದರ್ಶನಕ್ಕೆ ಪ್ರತ್ಯೇಕವಾಗಿ ಬೆಳಗ್ಗೆ 5.30 ರಿಂದ ಬೆಳಗ್ಗೆ 9.30 ರವರಿಗೆ ಸಮಯವನ್ನು ನಿಗದಿ ಪಡಿಸಲಾಗುವುದು ಎಂದರು.

ಚಾಮುಂಡಿ ಬೆಟ್ಟದಲ್ಲಿ ಪಾಸ್ಟಿಕ್ ಬ್ಯಾನ್ ಮಾಡಬೇಕು.  ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಬೆಟ್ಟದಲ್ಲಿ ವಾಸಿಸುತ್ತಿರುವ  ಸ್ಥಳೀಯರಿಗೆ  ತೊಂದರೆ ಆಗದಂತೆ ಅವರ ಆಧಾರ್ ಕಾರ್ಡ್ ನೋಡಿ ಪ್ರವೇಶ ನೀಡಬೇಕು. ಬೆಟ್ಟದಲ್ಲಿ ಇರುವ ನಮ್ಮ ಕ್ಲಿನಿಕ್ ನಲ್ಲಿ ದಿನದ 24 ಗಂಟೆ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿಗಳು ಇರಬೇಕು. ದೇವಸ್ಥಾನದ ಬಳಿಯಲ್ಲಿ 3 ಆಂಬುಲೆನ್ಸ್ ವ್ಯವಸ್ಥೆ ಇರಬೇಕು. ಚೆಸ್ಕಾ ವತಿಯಿಂದ ಪಾರ್ಕಿಂಗ್ ಸ್ಥಳ ಹಾಗೂ ಬೆಟ್ಟಕ್ಕೆ ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಎಂದರು .ಆಷಾಢ ಶುಕ್ರವಾರ ashada

ನಗರ ಪಾಲಿಕೆಯ ವತಿಯಿಂದ ಅಗತ್ಯ ಸಂಖ್ಯೆಯ ಪೌರ ಕಾರ್ಮಿಕರನ್ನು ನಿಯೋಜನೆ ಮಾಡಬೇಕು. ಸಂಚಾರಿ ಶೌಚಾಲಯಗಳನ್ನು ಪಾರ್ಕಿಂಗ್ ಮತ್ತು ಬೆಟ್ಟದ ಮೇಲೆ ಮಾಡಬೇಕು. ಭಕ್ತಾದಿಗಳ ಅನುಕೂಲಕ್ಕಾಗಿ 6 ಬ್ಯಾಟರಿ ವಾಹನಗಳ ವ್ಯವಸ್ಥೆ ಮಾಡಬೇಕು. ಅಗತ್ಯ ಸಂಖ್ಯೆಯ ಸಿ.ಸಿ ಟಿವಿಗಳನ್ನು ಅಳವಡಿಸಬೇಕು. ಖಾಸಗಿ ವಾಹನಗಳಿಗೆ ಬೆಟ್ಟಕ್ಕೆ ಪ್ರವೇಶ ಇರುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಮಾತನಾಡಿ ಲಲಿತ ಮಹಲ್ ಮೈದಾನದಿಂದ ಶುಕ್ರವಾರ ಶನಿವಾರ ಮತ್ತು ಭಾನುವಾರ ದಿನಗಳಂದು ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಬಸ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.ಭಕ್ತಾದಿಗಳಿಗೆ ಅನಾನುಕೂಲವಾಗದಂತೆ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ ashada.jpg1

ಪಾದರಕ್ಷೆಗಳನ್ನು ಬಿಡಲು ಲಲಿತ ಮಹಲ್ ಬಸ್ ಪಾರ್ಕಿಂಗ್ ಆವರಣದಲ್ಲಿ ವ್ಯವಸ್ಥೆ ಮಾಡಲಾಗುವುದು. ಸಿಟಿ ಬಸ್ ನಿಲ್ದಾಣದಿಂದ ಬರುವ ಭಕ್ತಾದಿಗಳಿಗೆ  ಪಾದರಕ್ಷೆಗಳನ್ನು ಬಿಡಲು ಸಿಟಿ ಬಸ್ ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ jk02_new jk02 new

ಸಭೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Ashada Friday, Meeting, Minister, Yathindra Siddaramaiah