Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ..? ಸಿಎಂ ಸಿದ್ದರಾಮಯ್ಯ ಚಾಟಿ.

ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ..? ಸಿಎಂ ಸಿದ್ದರಾಮಯ್ಯ ಚಾಟಿ.

ಬೆಂಗಳೂರು, ಫೆಬ್ರವರಿ 29,2024(www.justkannada.in):  ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯಾಗುವುದಿಲ್ಲವೇ ಎಂದು ಬಿಜೆಪಿ ವಿರುದ್ದ ಸಿಎಂ  ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಅವರು, 1.40 ಸಾವಿರ ಕೋಟಿ ನಮ್ಮಿಂದ ಕೇಂದ್ರ ಸರ್ಕಾರಕ್ಕೆ ತೆರಿಗೆ ಹೋಗುತ್ತದೆ. 100 ರೂ.ತೆರಿಗೆ ಕೊಟ್ಟರೆ ನಮಗೆ 12 ರೂ.ಗಳು ಮಾತ್ರ  ಕೇಂದ್ರದಿಂದ ತೆರಿಗೆ ಬರುತ್ತಿದೆ. ಇದನ್ನು ಸಮರ್ಥಿಸಿಕೊಳ್ಳಲು ಬಿಜೆಪಿಗೆ ನಾಚಿಕೆಯಾಗಬೇಕು ಎಂದರು.

ಕಾಳಜಿ ಇದೆಯೇ

14 ನೇ ಹಣಕಾಸು ಆಯೋಗದಲ್ಲಿ 4.7 %  ಹಾಗೂ 15 ನೇ ಹಣಕಾಸು ಆಯೋಗದಲ್ಲಿ 3.64 % ರಾಜ್ಯಕ್ಕೆ ನಿಗದಿಯಾಗಿ ಶೇ 1.07% ರಷ್ಟು ಕಡಿಮೆಯಾಗಿದೆ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ 2 ನೇ ರಾಜ್ಯವಾಗಿರುವ ಕರ್ನಾಟಕಕ್ಕೆ ಅತಿ ಹೆಚ್ಚು ಅನ್ಯಾಯವಾಗಿದೆ. ಕೇಂದ್ರದ ಅನ್ಯಾಯವನ್ನು ಬೆಂಬಲಿಸುವ ಬಿಜೆಪಿಗೆ ಕನ್ನಡಿಗರ ಬಗ್ಗೆ ಕಾಳಜಿ ಇದೆಯೇ..? ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗುಜರಾತಿನಿಂದ ತೆರಿಗೆ ಸಂಗ್ರಹಿಸಿಸಬೇಡಿ ಎಂದಿದ್ದರು. ನಾವು ಆ ಮಾತು ಹೇಳಿಲ್ಲ ಎಂದು ಕುಟುಕಿದರು.ಏಳು ಕೋಟಿ ಕನ್ನಡಿಗರಿಗೆ ಆಗಿರುವ ಅನ್ಯಾಯವನ್ನು ಸಮರ್ಥಿಸಿಕೊಳ್ಳಲು ನಾಚಿಕೆಯ...

ಇದೇ ವೇಳೆಗೆ ಮೋದಿ ಮೋದಿ,  ಜೈ ಶ್ರೀ ರಾಮ್  ಎಂದು ಕೂಗು ಹಾಕುತ್ತಿದ್ದ ವಿರೋಧಪಕ್ಷದವರನ್ನು ಉದ್ದೇಶಿಸಿ ನಿಮ್ಮದು ಕೇವಲ ನಿ:ಶಕ್ತಿ. ಮೋದಿ ಹೆಸರಿನ ಮೇಲೆ ನಡೆಸುತ್ತಿದ್ದೀರಿ. ಸಮಾಜ ಒಡೆಯುವ ಕೆಲಸ ನಿಮ್ಮದು.  ನಾವು ಜೈ ಸೀತಾರಾಮ್ ಎನ್ನುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಕೂಗಿದರು.

ಬಿಜೆಪಿ ಗೆ ತಲೆ ಖಾಲಿ, ಮೆದುಳು ಇಲ್ಲ. ರಾಮಾಯಾಣ ಮಹಾಭಾರತ ಓದಿಕೊಂಡೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿವಿದರು.

Key words: ashamed – defend – injustice – Kannadigas- CM –Siddaramaiah-BJP