ಅಶ್ವತ್ಥ್​ ನಾರಾಯಣ ಅಲ್ಲ ನವರಂಗಿ ನಾರಾಯಣ: ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಬಂದ್-ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಆಗಸ್ಟ್,14,2023(www.justkannada.in): ಬೆಂಗಳೂರು ಅಭಿವೃದ್ಧಿ ಸಚಿವರಲ್ಲ ನಿರ್ನಾಮ ಸಚಿವರು ಎಂದು ಹೇಳಿಕೆ ನೀಡಿದ್ಧ ಮಾಜಿ ಸಚಿವ ಡಾ.ಅಶ್ವತ್ಥ್​ ನಾರಾಯಣ್ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಅವರು ಅಶ್ವತ್ಥ್​ ನಾರಾಯಣ ಅಲ್ಲ ನವರಂಗಿ ನಾರಾಯಣ ಎಂದು ಲೇವಡಿ ಮಾಡಿದ್ದಾರೆ.

ಇಂದು ಮಾತನಾಡಿದ ಡಿ.ಕೆ ಶಿವಕುಮಾರ್,  ಅಶ್ವತ್ಥ್​ ನಾರಾಯಣ ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು. ಅಶ್ವತ್ಥ್​ ನಾರಾಯಣ ಸಚಿವರಾಗಿದ್ದಾಗ ಬೆಂಗಳೂರಿಗೆ ಏನು ಮಾಡಿದ್ದಾರೆ? ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನ ಎತ್ತಿಕಟ್ಟುತ್ತಿದ್ದಾರೆಂದು ಗೊತ್ತು. ಸ್ವಾತಂತ್ರ್ಯ ದಿನಾಚರಣೆ ನಂತರ ಎಲ್ಲದರ ಬಗ್ಗೆ ಮಾತಾಡುತ್ತೇನೆ ಎಂದು ಹೇಳಿದರು.

ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ.

ಕಾಂಗ್ರೆಸ್ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್​, ದಕ್ಷಿಣ ಭಾರತದಲ್ಲಿ ಬಿಜೆಪಿಯ ಬಾಗಿಲು ಮುಚ್ಚಿದೆ. ಯೋಗ ಬರುತ್ತದೆ, ಯೋಗಕ್ಕಿಂತ ಯೋಗಕ್ಷೇಮ ಬಹಳ ಮುಖ್ಯ. ಬಂದಿರುವ ಯೋಗವನ್ನು ಕಾಪಾಡಿಕೊಂಡು ಹೋಗಬೇಕು. ಟೀಂ ಎಫರ್ಟ್​​ನಿಂದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದಿದ್ದೇವೆ. 224ರ ಪೈಕಿ 218 ಅಭ್ಯರ್ಥಿಗಳಿಗೆ ಒಮ್ಮತದ ಟಿಕೆಟ್ ನೀಡಿದ್ದೆವು. ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂಬುದಷ್ಟೇ ನಮ್ಮ ಗುರಿಯಾಗಿತ್ತು. ವೈಯಕ್ತಿಕ ಭಿನ್ನಾಭಿಪ್ರಾಯವಿದ್ದರೂ ಕೂಡ ನಾವು ಕೆಲಸ ಮಾಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

Key words: Ashwath Narayana – Navrangi Narayana- BJP door –DCM- DK Shivakumar.