ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಅಧಿಕೃತ ಚಾಲನೆ ನೀಡಿದ ಅಶ್ವಿನಿ ಪುನಿತ್​ ರಾಜ್ ​​ಕುಮಾರ್

ಬೆಂಗಳೂರು ನವೆಂಬರ್,25,2023(www.justkannada.in):  ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ನಟ ದಿ.ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಅಧಿಕೃತ ಚಾಲನೆ ನೀಡಿದರು.

ನಮ್ಮ ಕಂಬಳ, ಬೆಂಗಳೂರು ಕಂಬಳ ಎಂಬ ಹೆಸರಿನಲ್ಲಿ  ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪಂದ್ಯ ನಡೆಯಲಿದೆ.  ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕರೆಯ ನೀರಿಗೆ ಅರ್ಪಣೆ ಮಾಡಿದರು. ದೀಪ ಬೆಳಗಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕಂಬಳಕ್ಕೆ ಚಾಲನೆ ನೀಡಿದರು. ಕಂಬಳ ಕರೆಗೆ ಅಶ್ವಿನಿ ಪುನಿತ್​ ರಾಜ್​​ ಕುಮಾರ್ ಅವರು ದೀಪ ಬೆಳಗುವ ಮೂಲಕ ಕೋಣಗಳ ಓಟಕ್ಕೆ ಚಾಲನೆ ನೀಡಿದರು.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ,  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಡಿ.ವಿ ಸದಾನಂದ ಗೌಡ,  ಶಾಸಕ ಎಸ್.ಆರ್.ವಿಶ್ವನಾಥ್ ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್​ ರೈ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Key words: Ashwini Punit Rajkumar – historic -Bangalore –kambala