ಕೊರೊನಾಂತಕ: ಏಷ್ಯನ್ ಬಾಕ್ಸಿಂಗ್ ಚಾಂಪಿಯನ್’ಶಿಪ್ ಸ್ಥಳಾಂತರ

ಬೆಂಗಳೂರು, ಏಪ್ರಿಲ್ 29, 2021 (www.justkannada.in): ಏಷ್ಯನ್‌ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಅನ್ನು ಸ್ಥಳಾಂತರಿಸಲಾಗಿದೆ.

ಈ ಮೊದಲು ಮೇ 21ರಿಂದ 31ರ ತನಕ ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು.

ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕಿನ ಪರಿಣಾಮ ಚಾಂಪಿಯನ್ ಶಿಪ್ ಅನ್ನು ಸ್ಥಳಾಂತರಿಸಲಾಗಿದೆ.

ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕೆಲ ರಾಷ್ಟ್ರಗಳು ಭಾರತಕ್ಕೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಿಸಿವೆ.

ಈ ಹಿನ್ನೆಲೆಯಲ್ಲಿ ಏಷ್ಯನ್‌ ಬಾಕ್ಸಿಂಗ್‌ ಒಕ್ಕೂಟದ ಜತೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಂಡಿರುವುದಾಗಿ ಬಾಕ್ಸಿಂಗ್‌ ಫೆಡರೇಷನ್‌ ಆಫ್‌ ಇಂಡಿಯಾ ತಿಳಿಸಿದೆ.