ಏಷ್ಯನ್ ಗೇಮ್ಸ್-2023: ಬಾಂಗ್ಲಾ ವಿರುದ್ಧ ಗೆದ್ದು ಫೈನಲ್ಸ್ ಪ್ರವೇಶಿಸಿದ ಟೀಂ ಇಂಡಿಯಾ

ಬೆಂಗಳೂರು, ಅಕ್ಟೋಬರ್ 06, 2023 (www.justkannada.in): ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್‌ ಗೇಮ್ಸ್‌-2023ರ ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟಿದೆ.

ಸೆಮಿಫೈನಲ್‌ನಲ್ಲಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆಯಿಟ್ಟಿದೆ. ಮೊದಲು ಸಂಘಟಿತ ಬೌಲಿಂಗ್‌ ಪ್ರದರ್ಶನದ ಮೂಲಕ ಬಾಂಗ್ಲಾದೇಶವನ್ನ 96 ರನ್‌ಗಳ ಅಲ್ಪಮೊತ್ತಕ್ಕೆ ಟೀಂ ಇಂಡಿಯಾ ಬೌಲರ್ ಗಳು ಕಟ್ಟಿಹಾಕಿದರು.

ನಂತರ ಬ್ಯಾಟಿಂಗ್ ಆರಂಭಿಸಿದ ಭಾರತ 9.2 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 97 ರನ್‌ಗಳಿಸುವ ಮೂಲಕ 9 ವಿಕೆಟ್‌ಗಳ ಜಯ ಸಾಧಿಸಿತು. ಇದರೊಂದಿಗೆ ಏಷ್ಯನ್‌ ಗೇಮ್ಸ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪ್ರವೇಶಿಸಿತು.

ನಾಯಕ ಋತುರಾಜ್‌ ಗಾಯಕ್ವಾಡ್‌(40*) ಹಾಗೂ ತಿಲಕ್‌ ವರ್ಮ(55*) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಅ.7ರಂದು ನಡೆಯುವ ಫೈನಲ್‌ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನ ತಂಡವನ್ನ ಎದುರಿಸಲಿದೆ.