ಕೇರಳಾದಲ್ಲಿ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಕಾರ್ಯಕರ್ತರ ಹತ್ಯೆ

ತಿರುವನಂತಪುರಂ, ಸೆಪ್ಟೆಂಬರ್ 01, 2020 (www.justkannada): ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾದ ಇಬ್ಬರು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.

ಕೇರಳದ ತಿರುವನಂತಪುರಂ ಜಿಲ್ಲೆಯ ತೆಂಬಮೂಡ್ ನಲ್ಲಿ ಈ ಘಟನೆ ನಡೆದಿದೆ. ಮಿಥಿಲಾಜ್ (30) ಹಾಗೂ ಹಕ್ ಮುಹಮ್ಮದ್ (24)  ಮೃತರು. ತೆಂಬಮೂಡ್ ನಲ್ಲಿ ಗುಂಪೊಂದು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದೆ. ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.