ಮೈಸೂರಿನಲ್ಲಿ ಫುಡ್ ಡೆಲಿವರಿ ಬಾಯ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ…

ಮೈಸೂರು,ಮಾರ್ಚ್,19,2021(www.justkannada.in): ಫುಡ್ ಡೆಲಿವರಿ ಬಾಯ್ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk

ರವಿಕುಮಾರ್ ಎಂಬುವವರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ನಗರದ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದೆ. ರವಿಕುಮಾರ್ ಫುಡ್ ಡಿಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ನಡುವೆ ರಾತ್ರಿ 10 ಗಂಟೆ ಸಮಯದಲ್ಲಿ ಮನೆಯೊಂದಕ್ಕೆ ಆಹಾರ ನೀಡಿ  ಬರುತ್ತಿದ್ದ ವೇಳೆ  ಹೈವೇ ವೃತ್ತದ ಸಮೀಪ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರವಿಕುಮಾರ್ ತಲೆಯ ಹಿಂಭಾಗಕ್ಕೆ ಆಯುಧದಿಂದ ಹೊಡೆದು ಹಲ್ಲೆ ಮಾಡಿದ್ದಾರೆ.assault-food-delivery-boy-mysore

ಹಲ್ಲೆಗೊಳಗಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ರವಿ ಕುಮಾರ್ ರನ್ನ ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದರು. ಇನ್ನು ಹಲ್ಲೆ ನಡೆಸಿದವರ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಪತ್ತೆಯಾಗಿಲ್ಲ. ನಗರದ ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Key words: Assault – food delivery -boy -Mysore.