Monday, October 5, 2026

BDA Apartments

ಪ್ರಧಾನಿ ಮೋದಿ ಭೇಟಿಯಾಗಿ BDA JK_Adv BDA Adv
Home Front Page ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ : KUWJ ಖಂಡನೆ

ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ, ಮಹಿಳಾ ಪತ್ರಕರ್ತೆಗೆ ಕಿರುಕುಳ : KUWJ ಖಂಡನೆ

ಬೆಂಗಳೂರು,ಅಕ್ಟೋಬರ್,5,2026 (www.justkannada.in): ದೆಹಲಿಯ ಜಂತರ್ ಮಂತರ್‌ ನಲ್ಲಿ ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ನಡೆದ ಹಲ್ಲೆ ಹಾಗೂ ಮಹಿಳಾ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ ನೀಡಿರುವ ಘಟನೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರವಾಗಿ ಖಂಡಿಸಿದೆ.

ಪ್ರತಿಭಟನೆಯ ವರದಿಗೆ ತೆರಳಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಹಾಗೂ ಮಹಿಳಾ ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ಖಂಡನೀಯ. ಪತ್ರಕರ್ತರು ತಮ್ಮ ವೃತ್ತಿಪರ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ನಡೆದಿರುವುದು ಆತಂಕಕಾರಿ ಎಂದು ಸಂಘ ಆಕ್ರೋಶ ವ್ಯಕ್ತಪಡಿಸಿದೆ.Delhi Police Assault Women Journalists shivanand

ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಹಾಗೂ ಮಹಿಳಾ ಪತ್ರಕರ್ತೆಗೆ ಕಿರುಕುಳ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ವೃತ್ತಿಪರ ಕರ್ತವ್ಯ ನಿರ್ವಹಿಸಲು ಸುರಕ್ಷಿತ ವಾತಾವರಣ ಕಲ್ಪಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.Delhi Police Assault Women Journalists jk02_new jk02 new

Key words: Assault, harassment, journalists, Delhi, KUWJ, condemns

English Summary
Title

Delhi Police Assault on Women Journalists: DUJ and KUWJ Condemn Sexual Harassment & Press Freedom Violations

Short Description
The Delhi Union of Journalists (DUJ) and KUWJ have strongly condemned the alleged sexual harassment and physical assault of women journalists by the Delhi Police. The incident occurred during media coverage of protests at Jantar Mantar in October 2026. Media bodies reported that an independent journalist accused an Assistant Commissioner of Police (ACP) of inappropriate touching, while others faced manhandling and restriction of movement. Protesting journalists demanding an FIR were later detained. The case has been transferred to the Crime Branch.