ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತಸಹಾಯಕನ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು.

ದಾವಣಗೆರೆ,ಅಕ್ಟೋಬರ್,18,2022(www.justkannada.in):  ದುಷ್ಕರ್ಮಿಗಳು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ನಿನ್ನೆ ರಾತ್ರಿ 10.30ರ ಸುಮಾರಿಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಆಪ್ತ ಸಹಾಯಕ ಪ್ರಜ್ವಲ್ ಮೇಲೆ  ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಗಾಯಗೊಂಡಿರುವ ಪ್ರಜ್ವಲ್ ರನ್ನ ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದು, ದುಷ್ಕರ್ಮಿಗಳನ್ನ ಬಂಧಿಸುವಂತೆ ಪೊಲೀಸರಿಗೆ  ಸೂಚನೆ ನೀಡಿದ್ದಾರೆ.

Key words: Assault – MLA- MP Renukacharya’s –PA-admitted – hospital.