Sunday, August 9, 2026

BDA Apartments

Home Front Page ಈ ಬಾರಿ ಬಿಜೆಪಿಗೆ 135ರಿಂದ 140 ಸ್ಥಾನ: ಕಾಂಗ್ರೆಸ್ ಸಂಪೂರ್ಣ ನೆಲಸಮ- ಮಾಜಿ ಸಿಎಂ ಬಿಎಸ್...

ಈ ಬಾರಿ ಬಿಜೆಪಿಗೆ 135ರಿಂದ 140 ಸ್ಥಾನ: ಕಾಂಗ್ರೆಸ್ ಸಂಪೂರ್ಣ ನೆಲಸಮ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.

ಬೆಂಗಳೂರು,ಏಪ್ರಿಲ್,21,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆದಿದೆ. ಇತ್ತ ಅಭ್ಯರ್ಥಿಗಳ ಪರ ಪ್ರಚಾರ, ಮತಯಾಚನೆ ಭರಾಟೆ ಜೋರಾಗಿದ್ದು,  ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್​ ಸಂಪೂರ್ಣ ನೆಲಸಮ ಆಗುತ್ತದೆ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ  ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ 135ರಿಂದ 140 ಸ್ಥಾನ ಗೆಲ್ಲುತ್ತದೆ. ನಾಳೆ ಅಥವಾ ನಾಡಿದ್ದು ನಮ್ಮ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ಪ್ರಚಾರ ಮಾಡ್ತಾರೆ ಎಂದರು.

ಯಾರೇ ಆದರೂ ಸರಿ ಬಿಜೆಪಿ  ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಅವರನ್ನ ಪಕ್ಷಕ್ಕೆ  ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

Key words: Assembly Election-bjp-Former CM-BS Yeddyurappa-congress