ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ-ಸಿಎಂ ಇಬ್ರಾಹಿಂ.

ಬೆಂಗಳೂರು,ಮೇ,12,2023(www.justkannada.in): ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ನಾಳೆ ಹೊರಬೀಳಲಿದ್ದು ಈ ನಡುವೆ ಕೆಲ ಸರ್ವೆಗಳು ಕಾಂಗ್ರೆಸ್ ಕೆಲ ಸರ್ವೆಗಳು ಬಿಜೆಪಿಗೆ ಇನ್ನೂ ಕೆಲ ಸರ್ವೆಗಳು  ಫಲಿತಾಂಶ ಅತಂತ್ರವಾಗಲಿದೆ ಎಂದು ವರದಿ ನೀಡಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ , ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ರಾಷ್ಟ್ರೀಯ ಪಕ್ಷಗಳು ಮಾಡಿವೆ ಎಂದಿದ್ದಾರೆ.

ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.

Key words: assembly election-JDS – king maker-CM Ibrahim