ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ: ಅಪರೇಷನ್ ಹಸ್ತದ ಅವಶ್ಯಕತೆ ನಮಗಿಲ್ಲ- ಡಿ.ಕೆ ಶಿವಕುಮಾರ್.

ಬೆಂಗಳೂರು,ಮೇ,11,2023(www.justkannada.in): ರಾಜ್ಯ ವಿಧಾನಸಭೆ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ಸಮೀಕ್ಷೆಗಳು ಪ್ರಕಟವಾಗಿದ್ದು, ಒಂದೊಂದು ಸಮೀಕ್ಷೆ ಒಂದೊಂದು ರೀತಿಯಲ್ಲಿದೆ.  ಹೀಗಾಗಿ ರಾಜ್ಯದಲ್ಲಿ ಬಹುಮತದ ಸರ್ಕಾರವೋ ಅತಂತ್ರ ಫಲಿತಾಂಶವೋ ಮೇ 13 ರಂದು ತಿಳಿಯಲಿದೆ.

ಸದ್ಯ ಮತದಾನ ಮುಗಿಯುತ್ತಿದ್ದಂತೆ ರಿಲ್ಯಾಕ್ಸ್ ಮೂಡ್ ಗೆ ಜಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ್ದಾರೆ.

ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ನಮ್ಮ ಗ್ಯಾರಂಟಿಗಳ ಮೇಲೆ ರಾಜ್ಯದ ಜನ ನಂಬಿಕೆ ಇಟ್ಟಿದ್ದಾರೆ. ಎಲ್ಲಾ ವರ್ಗದ ಜನರು ಕಾಂಗ್ರೆಸ್ ಪರ ಒಲವು ತೋರಿದ್ದಾರೆ.  ರಾಜ್ಯಾದ್ಯಂತ ಜನರು ಬದಲಾವಣೆ ಬಯಸಿದ್ದಾರೆ. ಹಳೇ ಮೈಸೂರು ಭಾಗದಲ್ಲೂ ಜನ ಬದಲಾವಣೆ ಬಯಸಿದ್ದಾರೆ. ಅಪರೇಷನ್ ಹಸ್ತದ ಅವಶ್ಯಕತೆ ನಮಗೆ ಇಲ್ಲ ಕಾಂಗ್ರೆಸ್ 141 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ  ಡಿ.ಕೆ ಶಿವಕುಮಾರ್.

Key words: assembly election- no stable- result-DK Shivakumar.