ಮತದಾನ ಕೇಂದ್ರದ ಆವರಣದಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ.

ಬಳ್ಳಾರಿ,ಮೇ,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಹುತೇಕ ಶಾಂತಿಯುತವಾಗಿ ನಡೆದಿದ್ದು ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳಾದ ವರದಿಯಾಗಿದೆ. ಈ ನಡುವೆ ಮತದಾನ ಕೇಂದ್ರದ ಆವರಣದಲ್ಲಿ ಮಹಿಳೆ ಮಗುವಿಗೆ ಜನ್ಮ ನೀಡಿರುವಂತಹ ಅಪರೂಪದ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕೊರ್ಲಾಗುಂದಿ ಗ್ರಾಮದ ಮತದಾನ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಮತದಾನ ಕೇಂದ್ರದಲ್ಲಿಯೇ ಗರ್ಭಿಣಿ ಮಣಿಲಾರಿಗೆ ಹೆರಿಗೆ ನೋವು ಪ್ರಾರಂಭವಾಗಿದ್ದು, ಕೂಡಲೇ ಪಕ್ಕದ ಕೊಠಡಿಗೆ ಕರೆದುಕೊಂಡು ಹೋಗಲಾಗಿದೆ. ಅಷ್ಟರಲ್ಲೇ  ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: assembly election-woman- gave- birth – child