Sunday, August 23, 2026

BDA Apartments

Home Front Page ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ.

ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣಾ ದಿನಾಂಕ ಪ್ರಕಟ.

ನವದೆಹಲಿ,ಮಾರ್ಚ್,16,2024(www.justkannada.in): ಈಗಾಗಲೇ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು  ಇದರ ಜೊತೆಗೆ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನೂ ಚುನಾವಣಾ ಆಯೋಗ  ಪ್ರಕಟಿಸಿದೆ.

ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕವನ್ನ ಪ್ರಕಟಿಸಿದ್ದಾರೆ.

ಒಡಿಶಾದ 147 ವಿಧಾನಸಭಾ ಸ್ಥಾನಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಹಾಗೆಯೇ ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಮೇ 13 ರಂದು ಚುನಾವಣೆ ನಡೆಯಲಿದೆ. ಆಂಧ್ರಪ್ರದೇಶದ ಮತ ಎಣಿಕೆ ಜೂನ್ 4 ರಂದು ನಡೆಯಲಿದೆ.

ಇನ್ನು ಅರುಣಾಚಲ ಪ್ರದೇಶದ 60 ವಿಧಾನಸಭಾ ಸ್ಥಾನಗಳಿಗೆ  ಹಾಗೂ ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಏಪ್ರಿಲ್ 19 ರಂದು ಚುನಾವಣೆ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ  ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: assembly- elections -four states – announced- Dates