ರಾಜ್ಯ ವಿಧಾನಸಭಾ ಚುನಾವಣೆ: ಡಿಕೆಶಿ, ಅಶ್ವತ್ ನಾರಾಯಣ್, ಹೆಚ್.ಡಿ ರೇವಣ್ಣ ಸೇರಿ ಹಲವು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ.

ಬೆಂಗಳೂರು,ಏಪ್ರಿಲ್,17,2023(www.justkannada.in): ರಾಜ್ಯ ವಿಧಾನಸಭಾ ಕಣ ರಂಗೇರುತ್ತಿದ್ದು ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ ಇಂದು ಶುಭ ಸೋಮವಾರದಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಉಮೇದುವಾರಿಕೆಯನ್ನ ಸಲ್ಲಿಕೆ ಮಾಡಿದರು.

ಹೊಳೇನರಸೀಪುರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ ರೇವಣ್ಣ  ನಾಮಪತ್ರ ಸಲ್ಲಿಸಿದರು.  ಹೆಚ್.ಡಿ ರೇವಣ್ಣಗೆ ಪತ್ನಿ ಪತ್ಇ ಭವಾನಿ ರೇವಣ್ಣ, ಪುತ್ರ ಸೂರಜ್  ಸಾಥ್ ನೀಡಿದರು.

ಕನಕಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ  ಡಿಕೆ ಶಿವಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಬೆಂಬಲಿಗರೊಂದಿಗೆ ಬೈಕ್ ರ್ಯಾಲಿ ಮೂಲಕ ಡಿಕೆ ಶಿವಕುಮಾರ್ ಶಕ್ತಿ ಪ್ರದರ್ಶನ ಮಾಡಿದರು.

ಇನ್ನು ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ  ನಿಖಿಲ್ ಕುಮಾರಸ್ವಾಮಿ  ನಾಮಪತ್ರ ಸಲ್ಲಿಸಿದರು. ಪುತ್ರನಿಗೆ ಮಾಜಿ ಸಿಎಂ  ಹೆಚ್.ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸಾಥ್ ನೀಡಿದರು. ರಾಮನಗರದ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಕೆ ನಂತರ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು.

ಇನ್ನೊಂದೆಡೆ ಮಲ್ಲೇಶ್ವರಂ ನಲ್ಲಿ ಸಚಿವ ಅಶ್ವಥ್ ನಾರಾಯಣ್ ಚಿಕ್ಕಮಗಳೂರಿನಲ್ಲಿ ಶಾಸಕ ಸಿಟಿ ರವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ  ಸಲ್ಲಿಕೆ ಮಾಡಿದರು. ಇನ್ನು ಸೊರಬದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕುಮಾರ್ ಬಂಗಾರಪ್ಪ, ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ವರೂಪ್ ಉಮೇದುವಾರಿಕೆ ಸಲ್ಲಿಸಿದರು.

Key words:  Assembly Elections- many candidates – filed – nomination