Tuesday, September 22, 2026

BDA Apartments

Home Front Page ಇನ್ನೂ ಕನಿಷ್ಠ 20 ದಿ‌ನ ಸಂಪೂರ್ಣ ಲಾಕ್ ಡೌನ್ ಮಾಡಿ- ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ...

ಇನ್ನೂ ಕನಿಷ್ಠ 20 ದಿ‌ನ ಸಂಪೂರ್ಣ ಲಾಕ್ ಡೌನ್ ಮಾಡಿ- ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ…

ಬೆಂಗಳೂರು,ಜೂ,23,2020(www.justkannada.in): ರಾಜ್ಯದಲ್ಲಿ ದಿನೇ ದಿನೇ ಕರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಇನ್ನೂ ಕನಿಷ್ಠ 20ದಿ‌ನ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್ ಲಾಕ್ ಡೌನ್ ಮಾಡಿದರೆ ಪ್ರಯೋಜನವಿಲ್ಲ.. ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ ಎಂದು ಸಲಹೆ ನೀಡಿದ್ದಾರೆ.at-least-20-day-full-lock-down-former-cm-hd-kumaraswamy-advises

ಹಾಗೆಯೇ ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ. ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು.  ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು ಎಂದು ಸರ್ಕಾರದ ವಿರುದ್ದ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Key words: At least- 20 day- full- lock down-Former CM -HD Kumaraswamy- advises