ತಾಳಿ ಕಟ್ಟುವ ಕೊನೇ ಗಳಿಗೆಯಲ್ಲಿ ಮದುವೆ ಬೇಡ ಎಂದ ವಧು: ಮುಂದೇನಾಯ್ತು….?

ಚಿತ್ರದುರ್ಗ,ಡಿಸೆಂಬರ್,8,2023(www.justkannada.in): ತಾಳಿ ಕಟ್ಟುವ ಕೊನೇ ಗಳಿಗೆಯಲ್ಲಿ ವಧು ಮದುವೆ ಬೇಡ ಎಂದು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಮಂಜುನಾಥ್ ಮತ್ತು ಐಶ್ವರ್ಯ ನಡುವೆ ವಿವಾಹ ನಿಶ್ಚಿಯವಾಗಿತ್ತು. ಅದರಂತೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಗೆ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಇನ್ನೇನು ವರ ಕೈಯಲ್ಲಿ ತಾಳಿ ಹಿಡಿದು ಕಟ್ಟಬೇಕು ಎನ್ನುವಷ್ಟರಲ್ಲೇ ವಧು ಕೈ ಅಡ್ಡ ಹಿಡಿದು ಮದುವೆ ಬೇಡ ಎಂದು ತಡೆದಿದ್ದಾಳೆ.

ಮಂಜುನಾಥ್ ತಾಳಿ ಕಟ್ಟಲು ಎದ್ದು ನಿಂತರೇ ಬೇಡ ಎಂದು ಕೈ ಅಡ್ಡ ಹಿಡಿದಿದ್ದಾಳೆ. ಈ ವೇಳೆ ಸಂಬಂಧಿಕರು ಐಶ್ವರ್ಯಳನ್ನು ಮನವೊಲಿಸಲು ಪ್ರಯತ್ನಿಸಿದ್ದು ಎಷ್ಟೇ ಹರಸಾಹಸ ಪಟ್ಟರೂ ಸಹ ಬಗ್ಗದ ಐಶ್ವರ್ಯ ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ್ದು. ಯುವತಿ ನಡೆಗೆ ಯುವಕನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಗ್ವಾದ ಉಂಟಾಗಿ ಕೊನೆಗೆ ಅಂತಿಮವಾಗಿ ಈ ಮದುವೆಯೇ ರದ್ದುಗೊಂಡಿದೆ.

Key words: At the last -minute – broken- marriage