ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಗ್ರಂಥಾಲಯ ಉದ್ಘಾಟನೆ

ಬೆಂಗಳೂರು,ಡಿಸೆಂಬರ್,25,2025 (www.justkannada.in):  ಇಂದು ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಜಯಂತಿ ಹಿನ್ನೆಲೆಯಲ್ಲಿ ಭಾರತ ರತ್ನ ವಾಜಪೇಯಿ ಗ್ರಂಥಾಲಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಉದ್ಘಾಟಿಸಿದರು.

ಮಲ್ಲೇಶ್ವರದ ಭಾವುರಾವ್ ದೇಶಪಾಂಡೆ ಭವನದಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ‘ಭಾರತ ರತ್ನ ವಾಜಪೇಯಿ ಗ್ರಂಥಾಲಯ’ವನ್ನು ಉದ್ಘಾಟನೆ ಮಾಡಿದರು.

ಈ  ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಸೇರಿ ಹಲವರು ಉಪಸ್ಥಿತರಿದ್ದರು.

Key words: Bharat Ratna, Atal Bihari Vajpayee, Library, inaugurated