ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ; ಬಿಜೆಪಿ ಹೈಕಮಾಂಡ್ ಗೆ ಸಲಹೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಮಂಡ್ಯ,ಜುಲೈ,22,2021(www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಸದ್ಯ ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ಇಂತಹ ವಿಷಯಗಳಿಗೆ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ ಎಂದು ಬಿಜೆಪಿ ಹೈಕಮಾಂಡ್‌ ಗೆ ಸಲಹೆ ನೀಡಿದ್ದಾರೆ.jk

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ,  ಸಿಎಂ ರಾಜೀನಾಮೆ ಸುಳಿವು ವಿಚಾರ ಇದು ನನಗೆ ಸಂಬಂಧಿಸಿದ ವಿಷಯ ಅಲ್ಲ, ಬಿಜೆಪಿ ಆಂತರಿಕ ವಿಚಾರ. ಬಿಜೆಪಿ ನಿರ್ಧಾರದಲ್ಲಿ ಮೂಗು ತೂರಿಸುವುದು ಶೋಭೆ ತರಲ್ಲ. ಸಿಎಂ ಬದಲಾವಣೆ ವಿಚಾರ 2 ವರ್ಷಗಳಿಂದ ನಡೆಯುತ್ತಿದೆ ಎಂದು ಹೇಳಿದರು.

ಸಿಎಂ ಬಿಎಸ್ ವೈ ಪರ ಮಠಾಧೀಶರ ಬೆಂಬಲ ವಿಚಾರ ಪ್ರತಿಕ್ರಿಯಿಸಿದ ಹೆಚ್.ಡಿಕೆ, ಬಿಎಸ್‌ವೈಗೆ ಮಠಾಧೀಶರ ಬೆಂಬಲ ವಿಚಾರಕ್ಕೆ ನಾನು ಮಹತ್ವ ಕೊಡುವುದಿಲ್ಲ. ಒಬ್ಬೊಬ್ಬರಲ್ಲಿ ಒಂದೊಂದು ಭಾವನೆ ಇದೆ, ಅವರ ಭಾವನೆ ವ್ಯಕ್ತಪಡಿಸಿದ್ದಾರೆ. ಅವರ ಭಾವನೆ ಸರಿಯೋ ತಪ್ಪೋ ನಿರ್ಧಾರ ಜನರದ್ದು ಎಂದರು.

Key words : atmosphere – give better –governance-CM –Change- Former CM- Kumaraswamy