ಹಮಾಸ್ ಉಗ್ರರಿಂದ ದಾಳಿ: ಇಸ್ರೇಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿ: ಯುದ್ಧ ಘೋಷಣೆ.

ಟೆಲ್ ಅವಿವ್,ಅಕ್ಟೋಬರ್,7,2023(www.justkannada.in):  ಪ್ಯಾಲೆಸ್ಟೀನ್‌ ನ ಹಮಾಸ್ ಉಗ್ರರು ಗಾಜಾದಿಂದ ಇಸ್ರೇಲ್ ಕಡೆಗೆ ಇಂದು ಬೆಳಗ್ಗೆ ರಾಕೆಟ್ ದಾಳಿ ನಡೆಸಿದ್ದು, ಇಸ್ರೇಲ್ ನಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇಸ್ರೇಲ್ ಯುದ್ಧ ಘೋಷಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಾಜಾ ಪಟ್ಟಿಯಿಂದ ಇಸ್ರೇಲ್  ಅನೇಕ ವಸತಿ ಪ್ರದೇಶಗಳ ಮೇಲೆ ರಾಕೆಟ್ ದಾಳಿ ನಡೆಸಲಾಗಿದ್ದು,  ಹಮಾಸ್ ಉಗ್ರರ ದಾಳಿ ಬೆನ್ನಲ್ಲೇ ಗಾಜಾಪಟ್ಟಿಯಲ್ಲಿನ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ಪ್ರತಿ ದಾಳಿ ನಡೆಸಿದೆ. ಜೆರುಸಲೆಂನಲ್ಲಿ ವಾಯು ದಾಳಿ ಸೈರನ್ ಮೊಳಗಿಸಲಾಗಿದೆ.

ರಾಜಧಾನಿ ಟೆಲ್ ಅವಿವ್ ಸೇರಿದಂತೆ ಅನೇಕ ಕಡೆ ಸೈರನ್ ಸಹಾಯದಿಂದ ವೈಮಾನಿಕ ದಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.  ಪ್ರಧಾನಿ ಬೆಂಜಮಿನ್ ನೆತನ್ಯಾಹು ಶೀಘ್ರದಲ್ಲಿಯೇ ಭದ್ರತಾ ಮುಖ್ಯಸ್ಥರ ಸಭೆ ನಡೆಸುವುದಾಗಿ ಹೇಳಿಕೆ ನೀಡಿದ್ದಾರೆ. ತನ್ನ ಕೃತ್ಯಗಳಿಗಾಗಿ ಹಮಾಸ್ ಭಾರೀ ಬೆಲೆ ತೆರಬೇಕಾಗಲಿದೆ ಎಂದು ನೆತನ್ಯಾಹು ಸರ್ಕಾರ ಎಚ್ಚರಿಕೆ ನೀಡಿದೆ.

Key words: Attack – Hamas terrorist- Tense situation – Israel