Sunday, August 2, 2026

BDA Apartments

Home Front Page ತನ್ವೀರ್ ಸೇಠ್ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತನಿಖೆ ವೇಳೆ...

ತನ್ವೀರ್ ಸೇಠ್ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತನಿಖೆ ವೇಳೆ ಬಯಲು…

ಮೈಸೂರು,ನ,21,2019(www.justkannada.in): ಮಾಜಿ ಸಚಿವ ತನ್ವೀರ್ ಸೇಠ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದ್ದು ಹಲ್ಲೆ ನಡೆಸಿದ ಆರೋಪಿಗೆ ವ್ಯವಸ್ಥಿತಿ ತರಬೇತಿ ನೀಡಲಾಗಿತ್ತು ಎಂಬ ವಿಚಾರ ತನಿಖೆ ವೇಳೆ ಬಯಲಾಗಿದೆ.

ಪ್ರಕರಣ ಸಂಬಂಧ ಮೈಸೂರು ನಗರ ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಆರೋಪಿ ಫರಾನ್ ಪಾಷಾ ಹಲ್ಲೆ ನಡೆಸಿದ ದೃಶ್ಯಾವಳಿಗಳನ್ನ ಪೊಲೀಸರು ಪರಿಶೀಲಿಸಿದ್ದಾರೆ. ಆರೋಪಿ ಫರಾನ್ ಸಂಗೀತ ಕಾರ್ಯಕ್ರಮದಲ್ಲಿ ಹೊಂಚು ಹಾಕಿ  ಶಾಸಕ ತನ್ವೀರ್ ಸೇಠ್ ಮೇಳೆ ಹಲ್ಲೆ ನಡೆಸಿದ್ದನು. ಮಚ್ಚಿನಿಂದ ನೇರವಾಗಿ ಕತ್ತಿಗೆ ಹೊಡೆದಿದ್ದನು.

ಈ ನಡುವೆ ಹಲ್ಲೆ ನಡೆಸಿದ ಆರೋಪಿ ಫರ್ಹಾನ್ ಪಾಷಾಗೆ  ವ್ಯವಸ್ಥಿತ ತರಬೇತಿ ನೀಡಲಾಗಿತ್ತು ಎಂಬುದು ತನಿಖೆ ವೇಳೆ ಬಯಲು ಬಯಲಾಗಿದೆ. ಇನ್ನು ತರಬೇತಿ ಎಲ್ಲಿ, ಹೇಗೆ ನೀಡಲಾಗಿತ್ತು ಎಂಬುದರ ಬಗ್ಗೆ ಖಾಕಿ ಪಡೆ ವಿಚಾರಣೆ ನಡೆಸುತ್ತಿದೆ. ಈ ನಡುವೆ ಆರೋಪಿ ಫರ್ಹಾನ್ ಮೊಬೈಲ್ ಕರೆಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದು,  ಸಂಶಯಾಸ್ಪದ ವ್ಯಕ್ತಿಗಳನ್ನ ಠಾಣೆಗೆ ಕರೆಸಿ ವಿಚಾರಣೆ ನಡೆಸುತ್ತಿದ್ದಾರೆ.

Key words: Attack – MLA-Tanveer Seth- Investigate – accused – trained.