Sunday, October 11, 2026

Dasara Wishes

Happy Dasara
Home Front Page ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ.

ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಬೇಸರ.

ಬೆಂಗಳೂರು,ಆಗಸ್ಟ್,16,2022(www.justkannada.in):  ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧ  ಮುಸಲ್ಮಾನ್ ಗೂಂಡಾಗಳು ಯುವಕನ ಮೇಲೆ  ಚಾಕು ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ.   ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಕೆಲ ಕಿಡಿಗೇಡಿಗಳು ಸಾವರ್ಕರ್ ಭಾವಚಿತ್ರ ತೆಗೆದು ಹಾಕಿದ್ದಾರೆ. ಮತ್ತೊಮ್ಮೆ ಅವಮಾನ ಮಾಡುವ ವಾತಾವರಣ ನಿರ್ಮಾಣವಾಗಿತ್ತು .ಬಳಿಕ ಪೊಲೀಸರು ಎಲ್ಲರನ್ನೂ ಸಮಾಧಾನ ಮಾಡಿ ಕಳಿಸಿದ್ದರು.  ಇಷ್ಟಾದರೂ ಪ್ರೇಮ್ ಸಿಂಗ್ ಎಂಬುವವನ ಮೇಲೆ ಮುಸಲ್ಮಾನ್ ಗೂಂಡಾಗಳು  ಚಾಕು ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ.   ಆರೋಪಿಗಳ ಬಂಧನ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪ್ರಕರಣ  ಬಗ್ಗೆ ಸಿಎಂ ಗಮನಕ್ಕೂ ತಂದಿದ್ದೇನೆ.  ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳು ನಿಲ್ಲುತ್ತಿಲ್ಲ. ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಿಎಂಗೆ ಮನವಿ ಮಾಡಿದ್ದೇನೆ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುವಂತೆ ಸಿಎಂಗೆ ಮನವಿ ಸಲ್ಲಿಸಿದ್ಧೇನೆ ಎಂದರು.

ಈ ಘಟನೆ ಹಿಂದೆ ಕಾಂಗ್ರೆಸ್ ಇದೆ.  ಕೊಲೆಗೆ ಯತ್ನಿಸಿದವರು ಯಾರು ಎಂದು ಪತ್ತ ಹಚ್ಚಲು ಮನವಿ ಮಾಡಿದ್ದೇವೆ.  ಇದೇ ವೇಳೆ ಪೊಲೀಸ್ ಸಿಬ್ಬಂದಿಗೂ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಸರ್ಕಾರ ಶಾಂತಿ ಕಾಪಾಡಲು ಬದ್ಧವಾಗಿದೆ.  ಹಿಂದೂಗಳು ಎದ್ದರೆ ಮುಸಲ್ಮಾನ್ ಗೂಂಡಾಗಳು ಉಳಿಯಲ್ಲ . ಮುಸಲ್ಮಾನ್ ಹಿರಿಯರಿಗೆ ಹೇಳುತ್ತೇನೆ.  ದಾರಿ ತಪ್ಪಿದ ಯುವಕರನ್ನ ಕರೆದು ನೀವು ಬುದ್ದಿ ಹೇಳಬೇಕು. ಇಲ್ಲದಿದ್ದರೇ ಸರ್ಕಾರ ಅವರಿಗೆ ತಕ್ಕ ಪಾಠ ಕಲಿಸುತ್ತದೆ ಎಂದು ಎಚ್ಚರಿಕೆ ನೀಡಿದರು.

Key words:  attacks – Hindus – not- stopping-KS Eshwarappa