ಕೆ.ಸಿ ಜನರಲ್ ಆಸ್ಪತ್ರೆ ವೈದ್ಯರೊಬ್ಬರ ಮೇಲೆ ಹಲ್ಲೆಗೆ ಯತ್ನ…

ಬೆಂಗಳೂರು,ಜು,22,2020(www.justkannada.in):  ಬೆಡ್ ಇಲ್ಲ. ರೋಗೆ ಬೇರೆ ಆಸ್ಪತ್ರೆಗೆ ದಾಖಲಿಸಿ ಎಂದು ಹೇಳಿದ ಕಾರಣ ವೈದ್ಯರೊಬ್ಬರ ಮೇಲೆ ರೋಗಿ ಕಡೆಯವರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.jk-logo-justkannada-logo

ನಿನ್ನೆ ಸಂಜೆ ಘಟನೆ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಕೆ.ಸಿ ಜನರಲ್ ಆಸ್ಪತ್ರೆ ವೈದ್ಯ ಸುರೇಶ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ. ನಾನ್ ಕೋವಿಡ್ ರೋಗಿಗಳಿಗೆ ಬೆಡ್ ಇಲ್ಲ. ಬೇರೆ ಆಸ್ಪತ್ರೆಗೆ ಸೇರಿಸಿ ಎಂದು ತಿಳಿಸಿದ ಕಾರಣ ವೈದ್ಯ ಸುರೇಶ್ ಅವರ ಮೇಲೆ ರೋಗಿ ಕಡೆಯವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಕೊರೋನಾ ಸೋಂಕು ಇಲ್ಲದ ವ್ಯಕ್ತಿಯನ್ನ ಆಸ್ಪತ್ರೆಗೆ ಕರೆತರಲಾಗಿತ್ತು. ರೋಗಿ ಸ್ಥಿತಿ ಗಂಭೀರವಿದ್ದ ಕಾರಣ ಐಸಿಯು ಇರುವ ಆಸ್ಪತ್ರೆಗೆ ದಾಖಲಿಸಿ . ಇಲ್ಲಿ ಬೆಡ್ ಮತ್ತು ಐಸಿಯು ಇಲ್ಲ ಎಂದು ವೈದ್ಯರು ತಿಳಿಸಿದ್ದರು. ಈ ಕಾರಣ ವೈದ್ಯರ ಮೇಲೆ ರೋಗಿ ಕಡೆಯವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.  ಇನ್ನು ಆಸ್ಪತ್ರೆಗೆ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Attempt – assault – doctor – KC General Hospital.