Friday, August 14, 2026

BDA Apartments

Home Front Page ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನ: ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರು ವಶಕ್ಕೆ.

ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನ: ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರು ವಶಕ್ಕೆ.

ಹುಬ್ಬಳ್ಳಿ,ಜನವರಿ,3,2024(www.justkannada.in):  ರಾಮಜನ್ಮಭೂಮಿ ಹೋರಾಟ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಎದುರು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪೊಲೀಸ್ ಠಾಣೆ ಎದುರೇ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ ಪೊಲೀಸ್ ಠಾಣೆಗೆ ಮುತ್ತಿಗೆಗೆ ಯತ್ನಿಸಿದರು.  ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಆರ್.ಅಶೋಕ್, ಇದೊಂದು ಗೂಂಡಾಗಿರಿ ಸರ್ಕಾರ,  ಹೇಡಿ ಸರ್ಕಾರ 3 ದಿನಗಳಲ್ಲಿ ಶಹರ ಠಾಣೆಯ ಇನ್ಸ್ ಪೆಕ್ಟರ್ ಅಮಾನತುಗೊಳಿಸಬೇಕು  ಎಂದು ಆಗ್ರಹಿಸಿದರು.

Key words: Attempt – besiege- police station- R.Ashok – BJP workers -arrested.