ಟಿ-20 ವಿಶ್ವಕಪ್ ನಿಂದ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್: ಸೆಮಿ ಫೈನಲ್ ಗೆ ಲಗ್ಗೆಇಟ್ಟ ಇಂಗ್ಲೆಂಡ್.

ಆಸ್ಟ್ರೇಲಿಯಾ,ನವೆಂಬರ್,5,2022(www.justkannada.in):   ಟಿ-20 ವಿಶ್ವಕಪ್ ನಲ್ಲಿ  ಇಂದು ನಡೆದ ಸೂಪರ್ 12 ಸುತ್ತಿನ ಮೊದಲ ಗುಂಪಿನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಇಂಗ್ಲೆಂಡ್ ಜಯಸಾಧಿಸಿ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ಈ ಮೂಲಕ ಹಾಲಿ ಚಾಂಪಿಯನ್ ಆಸ್ಪ್ರೇಲಿಯಾ ಔಟ್ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ. ಮೊದಲ ಗುಂಪಿನಿಂದ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ತಂಡಗಳು ಅಧಿಕೃತವಾಗಿ ಸೆಮಿಫೈನಲ್​ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ.

ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿಯುವ ಆಸ್ಟ್ರೇಲಿಯಾ ಕನಸು ಭಗ್ನಗೊಂಡಿದೆ. ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ  ಶ್ರೀಲಂಕಾ 141 ರನ್ ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತ್ತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ 19.4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 144 ರನ್ ಬಾರಿಸುವ ಮೂಲಕ ಜಯ ಸಾಧಿಸಿತು.

2ನೇ ಗುಂಪಿನಲ್ಲಿ ಸೆಮಿಫೈನಲ್ ಗೆ ಯಾವುದೇ ತಂಡ ಖಚಿತವಾಗಿಲ್ಲ. 2 ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಭಾರತ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಸೆಮಿಫೈನಲ್ ನ ರೇಸ್ ನಲ್ಲಿವೆ. ನಾಳೆ ನಡೆಯುವ ಪಂದ್ಯಗಳಲ್ಲಿ ನಿರ್ಧಾರವಾಗಲಿದೆ.

Key words: Australia -out -T20 World Cup- England -semi final