ಆಸ್ಟ್ರಿಯಾ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ‘ಅಮೃತಮತಿ’ ಆಯ್ಕೆ….

ಬೆಂಗಳೂರು,ಜೂ,27,2020(www.justkannada.in): ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಅಭಿನಯಿಸಿರುವ  ‘ಅಮೃತಮತಿ’ ಸಿನಿಮಾ ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.Austria International Film Festival

ಹೌದು, ಕೊರೊನಾ ಲಾಕ್‍ಡೌನ್ ಹಿನ್ನೆಲೆ ಮೊದಲಿಗೆ ಆನ್‍ಲೈನ್ ಸ್ಕ್ರೀನಿಂಗ್ ಮೂಲಕ ಚಿತ್ರೋತ್ಸವ ಆಯೋಜಿಸಲಾಗಿದ್ದು, ಇದು ಜು.22ರಿಂದ ಆಗಸ್ಟ್ 5ರ ವರೆಗೆ ನಡೆಯಲಿದೆ. ಇನ್ನು ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಪುಟ್ಟಣ್ಣ ಅವರು ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು “ಅಮೃತಮತಿ” ಚಿತ್ರ ನಿರ್ದೇಶಿಸಿದ್ದಾರೆ.

ಕನ್ನಡ ಚಿತ್ರವು ಆಸ್ಟ್ರಿಯಾ ದೇಶದ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.