ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ.

ನವದೆಹಲಿ,ಆಗಸ್ಟ್,28,2023(www.justkannada.in): ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಹಿನ್ನೆಲೆ, ಕೆಆರ್ ಎಸ್ ಜಲಾಶಯ ಭರ್ತಿಯಾಗದೇ  ಕಾವೇರಿ ಜಲಾನಯನ ಪ್ರದೇಶದ ರೈತರು  ಜನರಿಗೆ ಆತಂಕ ಶುರುವಾಗಿದೆ. ಈ ಮಧ್ಯೆಯೂ ಇದೀಗ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿವಾದ ಸಂಬಂಧ  ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆ ಮುಕ್ತಾಯವಾಗಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕರ್ನಾಟಕ ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ.

ಕಳೆದ ಶುಕ್ರವಾರ ಕಾವೇರಿ ನದಿ ವಿವಾದಕ್ಕೆ  ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ನೀರು ಬಿಡುವಂತೆ ಆದೇಶಿಸಲು ಸಾಧ್ಯವಿಲ್ಲ ಎಂದು ತಮಿಳುನಾಡಿಗೆ ಚಾಟಿ ಬೀಸಿತ್ತು.  ಆದರೆ ಕೆಆರ್ ಎಸ್ ಭರ್ತಿಯಾಗದಿದ್ದರೂ ತಮಿಳುನಾಡಿಗೆ ನೀರು ಹರಿಸುವಂತೆ ಪ್ರಾಧಿಕಾರ ಸೂಚಿಸಿರುವುದು ರಾಜ್ಯದ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದಂತಾಗಿದೆ.

Key words: Authority – Karnataka -government – release- 5 thousand- cusecs – water -daily – Tamil Nadu.