Saturday, October 31, 2026

Dasara Wishes

Happy Dasara
Home Crime ಬೆಂಗಳೂರಿನ ಪಂಚತಾರಾ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ವಿದೇಶಿಗರು ಸಾವು!

ಬೆಂಗಳೂರಿನ ಪಂಚತಾರಾ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ವಿದೇಶಿಗರು ಸಾವು!

ಬೆಂಗಳೂರಿನ ಪಂಚತಾರಾ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ವಿದೇಶಿಗರು ಸಾವು!

ಬೆಂಗಳೂರು,ಅ,31,2026 (www.justkannada.in):  ನಗರದ ಹಲಸೂರು ಪ್ರದೇಶದಲ್ಲಿರುವ ಖಾಸಗಿ ಪಂಚತಾರಾ ಹೋಟೆಲ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ವಿದೇಶಿ ಪ್ರಜೆಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಹಲಸೂರಿನ ಕಾನ್ರಾಡ್ ಹೋಟೆಲ್‌ನ ಮೂರನೇ ಮಹಡಿಯಲ್ಲಿರುವ ಸ್ವಿಮ್ಮಿಂಗ್ ಪೂಲ್‌ನಲ್ಲಿ ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಸ್ಲೋವಾಕಿಯಾ ಮೂಲದ ಓರಿಯಾಟ್ (45) ಹಾಗೂ ಡಚ್ ಮೂಲದ ಅಲೆಕ್ಸಾಂಡರ್ ಮ್ಯಾಕ್ಸಿಲನ್ (59) ಎಂದು ಗುರುತಿಸಲಾಗಿದೆ. ಇಬ್ಬರೂ ಕಳೆದ ಕೆಲವು ದಿನಗಳಿಂದ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು.

ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್ ತಗುಲಿದ್ದರಿಂದ ಇಬ್ಬರೂ ಮೃತಪಟ್ಟಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಇಬ್ಬರ ರಕ್ಷಣೆಗೆ ಮುಂದಾದ ಅಮೆರಿಕ ಮೂಲದ ವ್ಯಕ್ತಿ ಹಾಗೂ ಹೋಟೆಲ್‌ನ ಪೂಲ್ ಅಟೆಂಡರ್ ಕೂಡ ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದಾರೆ. ತಕ್ಷಣ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಚಿಕಿತ್ಸೆ ಮುಂದುವರಿದಿದೆ.ಬೆಂಗಳೂರಿನ ಪಂಚತಾರಾ ಹೋಟೆಲ್ ಸ್ವಿಮ್ಮಿಂಗ್ ಪೂಲ್‌ನಲ್ಲಿ ವಿದ್ಯುತ್ ಶಾಕ್‌ಗೆ ಇಬ್ಬರು ವಿದೇಶಿಗರು ಸಾವು!

ಘಟನೆಗೆ ಸಂಬಂಧಿಸಿದಂತೆ ಅಲೆಕ್ಸಾಂಡರ್ ಅವರ ಪತ್ನಿ ಹೋಟೆಲ್ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದ್ದಾರೆ. ಹೋಟೆಲ್‌ನ ನಿರ್ಲಕ್ಷ್ಯವೇ ಇಬ್ಬರ ಸಾವಿಗೆ ಕಾರಣ ಎಂಬ ಆರೋಪವೂ ಕೇಳಿಬಂದಿದೆ.Two foreigners adeat1

ಘಟನಾ ಸ್ಥಳಕ್ಕೆ ಹಲಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೋಟೆಲ್‌ನ ಸುರಕ್ಷತಾ ವ್ಯವಸ್ಥೆ ಹಾಗೂ ವಿದ್ಯುತ್ ಸಂಪರ್ಕದಲ್ಲಿನ ಲೋಪಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Two foreigners, die , electric shock , swimming pool , five-star hotel , Bengaluru!

English Summary
Title

Two foreigners die from electric shock in a swimming pool at a five-star hotel in Bengaluru!

Short Description
Two foreign nationals have died after suffering an electric shock in the swimming pool of a private five-star hotel in the Halasuru area of ​​the city. The tragic incident occurred yesterday evening in the swimming pool located on the third floor of the Conrad Hotel in Halasuru. The deceased have been identified as Oriat (45), a native of Slovakia, and Alexander Maximilian (59), a Dutch national. Both had been staying at the hotel for the past few days.
Keywords
Two foreigners, die, electric shock, swimming pool, five-star hotel, Bengaluru!