Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್

ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್

ಬೆಂಗಳೂರು,ಜುಲೈ,8,2026 (www.justkannada.in): ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್ ಗಳು ನಿಯೋಜನೆಗೊಂಡಿರುವುದರಿಂದ ಜುಲೈ ತಿಂಗಳ ನಿಯಮಿತ ಮೀಟರ್ ರೀಡಿಂಗ್ ಇರುವುದಿಲ್ಲ, ಗ್ರಾಹಕರಿಗೆ ಸರಾಸರಿ (Average Bills) ಬಿಲ್ ಗಳನ್ನು ನೀಡಲಾಗುತ್ತದೆ.

ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಆದರೆ ಎಚ್ ಟಿ ಗ್ರಾಹಕರು, 40 HP ಮತ್ತು ಅದಕ್ಕಿಂತ ಹೆಚ್ಚಿನ ಮಂಜೂರಾದ ಲೋಡ್ ಹೊಂದಿರುವ ಲೋ ಟೆನ್ಷನ್ (LT) ಗ್ರಾಹಕರು, ಸೋಲಾರ್ ರೂಫ್ಟಾಪ್ (SRTPV) ಗ್ರಾಹಕರು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಗ್ರಾಹಕರಿಗೆ ನೈಜ ಮೀಟರ್ ರೀಡಿಂಗ್ ಆಧಾರದ ಮೇಲೆ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್ BDA JK_Adv BDA Adv

ಜುಲೈ ತಿಂಗಳ ಸರಾಸರಿ ಬಿಲ್ ಗಳನ್ನು ಗ್ರಾಹಕರಿಗೆ ಎಸ್.ಎಮ್. ಎಸ್ ಮತ್ತು ಇಮೇಲ್ ಮೂಲಕ ಕಳುಹಿಸಲಾಗುವುದು. ಗೃಹ ಬಳಕೆದಾರರಿಗೆ ಆಗಸ್ಟ್ ತಿಂಗಳಿನಿಂದ ಯಥಾಪ್ರಕಾರ ನಿಯಮಿತ ಮೀಟರ್ ರೀಡಿಂಗ್ ಮತ್ತು ನೈಜ ವಿದ್ಯುತ್ ಬಳಕೆಯ ಆಧಾರದಮೇಲೆ ಬಿಲ್ ನೀಡಲಾಗುವುದು.ಜುಲೈ ತಿಂಗಳಿನಲ್ಲಿ ಬೆಸ್ಕಾಂನಿಂದ ಗ್ರಾಹಕರಿಗೆ ಸರಾಸರಿ ಬಿಲ್ bescom

ಸರಾಸರಿ ಬಿಲ್ಲಿಂಗ್ ಅವಧಿಯಲ್ಲಿನ ವ್ಯತ್ಯಾಸದ ಯೂನಿಟ್ ಗಳನ್ನು, ನೈಜ ಮೀಟರ್ ರೀಡಿಂಗ್ ಆರಂಭವಾದ ನಂತರ ಮುಂದಿನ ಬಿಲ್ ಗಳಲ್ಲಿ ಸೂಕ್ತವಾಗಿ ಹೊಂದಾಣಿಕೆ (Adjust) ಮಾಡಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.justkannada jk02_new jk02 new

ಗ್ರಾಹಕರು ಜುಲೈ ಬಿಲ್ ನ ಪಾವತಿಗೆ ಪ್ರಸ್ತುತ ಚಾಲ್ತಿಯಲ್ಲಿರುವ ಎಲ್ಲಾ ಪಾವತಿ ವಿಧಾನಗಳನ್ನು(ಉಪ ವಿಭಾಗದ ನಗದು ಕೌಂಟರ್ ಗಳು, ಬೆಸ್ಕಾಂ ವೆಬ್ ಸೈಟ್, ಬೆಸ್ಕಾಂ ಮಿತ್ರ ಆಪ್ ಹಾಗೂ ಥರ್ಡ್ ಪಾರ್ಟಿ ಆಪ್) ಬಳಸಿಕೊಳ್ಳಬಹುದು.

Key words: Average bill, customers, BESCOM, July