ಮೈಸೂರಿನಲ್ಲಿ ಆ.26 ಕ್ಕೆ ಗಳಗನಾಥ, ರಾಜಪುರೋಹಿತ್ ಪ್ರಶಸ್ತಿ ಪ್ರದಾನ…

ಬೆಂಗಳೂರು ಆ,24,2019(www.justkannada.in):  ಹಾವೇರಿಯ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ 2018 ನೇ ಸಾಲಿನ ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ 26 ರಂದು ಮೈಸೂರಿನಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ 10.30 ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಮೈಸೂರಿನ ಪ್ರಾಚೀನ ಇತಿಹಾಸ ಹಾಗೂ ಪುರಾತತ್ವ ಅಧ್ಯಯನ ಕೇಂದ್ರದ ವಿಶ್ರಾಂತ ಪ್ರಾಧ್ಯಾಪಕರಾದ ಡಾ.ಎ.ವಿ.ನರಸಿಂಹಮೂರ್ತಿ ಅವರಿಗೆ ನಾ.ಶ್ರೀ ರಾಜಪುರೋಹಿತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಹಿರಿಯ ಕಾದಂಬರಿಕಾರ ಡಾ.ಬಿ.ಎಲ್ ವೇಣು ಅವರಿಗೆ ಗಳಗನಾಥ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗುತ್ತಿದೆ.

ಸಮಾರಂಭವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅವರು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಜಾನಕಿ ಮತ್ತು ಕುವೆಂಪು ಅಧ್ಯಯನ ಸಂಸ್ಥೆಯ ನಿರ್ದೇಶಕ ಡಾ.ಎನ್.ಎಂ.ತಳವಾರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಗಳಗನಾಥ ಅವರ ಕುರಿತು ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ ಅವರು ಮಾತನಾಡಲಿದ್ದರೆ, ನಾ.ಶ್ರೀ ನಾ.ಶ್ರೀ ರಾಜಪುರೋಹಿತ ಅವರ ಬಗ್ಗೆ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಅವರು ಮಾತನಾಡಲಿದ್ದಾರೆ. ಗಳಗನಾಥ ಮತ್ತು ನಾ.ಶ್ರೀ ರಾಜಪುರೋಹಿತ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ.ದುಶ್ಯಂತ ನಾಡಗೌಡ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

Key words: Award-Galaganatha- Rajapurohit- Award aug 26 -Mysore