Sunday, August 9, 2026

BDA Apartments

Home Crime ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ ಪ್ರಾಥಮಿಕ ವರದಿಯ ಶಿಫಾರಸಿನ ಮೇರೆಗೆ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ ಬಂಧನ ಕ್ರಮ ಕೈಗೊಳ್ಳಲಾಗಿದೆ.

ಬಂಧಿತರನ್ನು ಅನುಕಲ್ಸ್ ಮಿಶ್ರಾ ಮತ್ತು ಲವಕುಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಎಂಟು ಆರೋಪಿಗಳ ಪೈಕಿ ಆರು ಮಂದಿ ರಾಮಮಂದಿರದ ಸಿಬ್ಬಂದಿಯಾಗಿದ್ದಾರೆ ಎನ್ನಲಾಗಿದೆ.

ರಮಾಶಂಕರ್ ಮಿಶ್ರಾ, ಅವಿನಾಶ್ ಶುಕ್ಲಾ, ಮನೀಶ್ ಯಾದವ್, ಸುಭಾಷ್‌ಚಂದ್ರ ಶ್ರೀವಾತ್ಸವ ಹಾಗೂ ಕರುಣೇಶ್ ಪಾಂಡೆ ಸೇರಿದಂತೆ ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಈ ಪೈಕಿ ರಾಮ ಜನ್ಮಭೂಮಿ ಟ್ರಸ್ಟ್‌ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಚಾಲಕರಾಗಿದ್ದ ರಮಾಶಂಕರ್ ಮಿಶ್ರಾ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Key words: Ayodhya, Ram Mandir, Donation, Misappropriation, Two Arrested