Friday, September 11, 2026

BDA Apartments

ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ BDA JK_Adv BDA Adv
Home Front Page ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ.

ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ.

ಅಯೋಧ್ಯೆ,ಜನವರಿ,23,2024(www.justkannada.in):  ರಾಮಜನ್ಮಭೂಮಿ ಅಯೋಧ್ಯೆ ರಾಮಮಂದಿರ ನಿನ್ನೆ ಲೋಕಾರ್ಪಣೆಯಾಗಿದ್ದು ಪ್ರಧಾನಿ ಮೋದಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಶ್ರೀರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಬಾಲರಾಮನನ್ನ ನೋಡಲು ಭಕ್ತಸಾಗರವೇ ಹರಿದು ಬರುತ್ತಿದೆ.

ಹೌದು, ರಾಮಮಂದಿರ ಲೋಕಾರ್ಪಣೆಯಾದ ಬೆನ್ನಲ್ಲೆ ಬಾಲರಾಮನ ದರ್ಶನ ಪಡೆಯಲು ಭಕ್ತರ ದಂಡೇ ಲಗ್ಗೆ ಇಡುತ್ತಿದೆ. ಬೆಳಿಗ್ಗೆಯಿಂದಲೇ ಶ್ರೀರಾಮನ ದೇವಸ್ಥಾನದಲ್ಲಿ ನೂಕು ನುಗ್ಗಲು ಉಂಟಾಗಿದೆ. ದೇಶದ ಮೂಲೆ ಮೂಲೆಗಳಿಂದಲೂ  ಭಕ್ತಸಾಗರ ಹರಿದು ಬರುತ್ತಿದೆ.ಅಯೋಧ್ಯೆ ಬಾಲರಾಮನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ ramamandir

ಕ್ಷಣ ಕ್ಷಣಕ್ಕೂ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಬಾಲರಾಮನ ದರ್ಶನಕ್ಕೆ ಜನರು ಮುಗಿಬಿದ್ದಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ರಾಮಮಂದಿರವನ್ನ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರು, ಸೆಲೆಬ್ರೆಟಿಗಳು ಪಾಲ್ಗೊಂಡಿದ್ದರು.

Key words: Ayodhya ramamandir-devotees -Balarama.