Sunday, October 18, 2026

Dasara Wishes

Happy Dasara
Home Front Page ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನ.

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನ.

ಅಯೋಧ್ಯೆ,ಜನವರಿ,22,2024(www.justkannada.in): ಐನೂರು ವರ್ಷಗಳ ಹಿಂದೂಗಳ ಕನಸು ನನಸಾಗಿದ್ದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದಲ್ಲಿ ಇಂದು ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ  ಕಾರ್ಯ ನೆರವೇರಿತು.

ಅಯೋಧ್ಯೆ ನೂತನ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸಮಸ್ತ ಜನತೆಯ ಪರವಾಗಿ ಯಜಮಾನನಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನ modi- rama prana pratiste modi ...

ಅಭಿಜಿತ್ ಲಗ್ನದಲ್ಲಿ  ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಪೂಜಾ ವಿಧಿವಿಧಾನ ನೆರವೇರಿಸಿದರು.  ನೂತನ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮ ಲಲ್ಲಾನಿಗೆ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಉಪಸ್ಥಿತರಿದ್ದರು.ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂಪನ್ನ modi modi 3

Key words: Ayodhya- Sri Rama Lalla -Prana Pratishtapana- PM Modi