ಅಯೋಧ್ಯೆ ತೀರ್ಪು: ಕೋರ್ಟ್ ಹಾಲ್‌ಗೆ ಐವರು ನ್ಯಾಯಾಧೀಶರ ಆಗಮನ

ನವದೆಹಲಿ, ನವೆಂಬರ್ 09, 2019 (www.justkannada.in): ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಲಿದೆ.

ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಇನ್ನು ನ್ಯಾಯಾಲಯದ ಹಾಲ್‌ಗೆ ಐವರು ನ್ಯಾಯಾಧೀಶರು ಕೂಡ ಆಗಮಿಸಿದ್ದಾರೆ.