ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸು-ಮಾಜಿ ಸಿಎಂ ಹೆಚ್.ಡಿಕೆ.

ಅಯೋಧ್ಯೆ,ಜನವರಿ,22,2024(www.justkannada.in): ಇಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಈ ಸಂಬಂಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಶುಭಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ.‌ ಅಸಂಖ್ಯಾತ ಕರಸೇವಕರ ಹೋರಾಟ, ತ್ಯಾಗ-ಬಲಿದಾನದ ಫಲ ಸಾಕಾರವಾಗಿದೆ.

ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನೆರವೇರುತ್ತಿದೆ. ಈ ಎಲ್ಲಾ ಕರಸೇವಕರ ಪರಿಶ್ರಮದ ಫಲದಿಂದ ಇಂತಹ ದಿವ್ಯಕ್ಷಣಕ್ಕೆ ಪ್ರತ್ಯಕ್ಷ ಸಾಕ್ಷಿಯಾಗುವ ಪುಣ್ಯ ನನಗೆ ಧಕ್ಕಿದೆ ಮತ್ತು ಶ್ರೀರಾಮ ದೇವರಿಗೆ ಭಕ್ತಿ ಸಮರ್ಪಣೆ ಮಾಡುವ ಸುದೈವವೂ, ಅವಕಾಶವು ನನ್ನದಾಗಿದೆ.

ಎಲ್ಲ ಕರಸೇವಕರನ್ನೂ ಸ್ಮರಿಸುತ್ತಾ, ಈ ಸುಸಂದರ್ಭದಲ್ಲಿ ಸಮಸ್ತ ರಾಮಭಕ್ತರಿಗೆ ಶುಭಾಶಯಗಳನ್ನು ಕೋರುತ್ತೇನೆ. ಪ್ರತಿಯೊಬ್ಬರಿಗೂ ಆ ರಾಮದೇವರು ಸುಖ-ಶಾಂತಿ, ನೆಮ್ಮದಿ-ಸಮೃದ್ಧಿಯನ್ನು ಕರುಣಿಸಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

Key words: ayodhye-Ramamandir-true-Former CM -H.D.K