ಮೈಸೂರು,ಅಕ್ಟೋಬರ್,1,2025 (www.justkannada.in): ಇಂದು ನಾಡಿನಾದ್ಯಂತ ಆಯುಧಪೂಜೆ ಸಂಭ್ರಮವಾಗಿದ್ದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ ಕಳೆಗಟ್ಟಿದೆ ಮನೆ ಮಾಡಿದೆ. ಬೆಳಗ್ಗೆಯಿಂದಲೇ ಸಾಂಪ್ರದಾಯಿಕ ಪೂಜೆ-ಪುನಸ್ಕಾರಗಳು ನಡೆದಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾಕೈಂಕರ್ಯ ನೆರವೇರಿಸಿದ್ದಾರೆ.
ಬೆಳಗ್ಗೆ ಅರಮನೆಯಲ್ಲಿ ಚಂಡಿಕಾ ಹೋಮ ನಡೆಯಿತು. ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಆಯುಧಗಳನ್ನು ಪಲ್ಲಕ್ಕಿಯಲ್ಲಿ ರವಾನಿಸಿ ಶುಚಿಗೊಳಿಸಿದ ಬಳಿಕ ಆಯುಧಗಳನ್ನ ಪಲ್ಲಕಿಯಲ್ಲಿ ವಾಪಸ್ ಅರಮನೆಗೆ ರವಾನೆ ಮಾಡಲಾಯಿತು. ನಂತರ ಅರಮನೆಯ ಆನೆ ಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಕಾರ್ಯ ನಡೆದಿದ್ದು, ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಯದುವೀರರು ಪೂಜೆ ಸಲ್ಲಿಸಿದರು. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆಯುಧ ಪೂಜೆ ನೆರವೇರಿಸಿದರು.
ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸುಗಳಿಗೂ ಪೂಜೆ ಸಲ್ಲಿಸಿದ ಬಳಿಕ ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಸಲ್ಲಿಕೆ ಮಾಡಲಾಯಿತು.
ಸೋಮೇಶ್ವರ ದೇಗುಲಕ್ಕೆ ಪಟ್ಟದ ಕತ್ತಿಯ ಜೊತೆಗೆ ಪಲ್ಲಕ್ಕಿ ಹೊರಟಿ. ಪಟ್ಟದ ಆನೆಗಳು. ಪಟ್ಟದ ಕುದುರೆಗಳ ಜೊತೆಗೆ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು.
Key words: Ayudha Puja, celebration, Mysore Palace