Wednesday, July 29, 2026

BDA Apartments

Home Front Page ದೇಶದ ಪ್ರತಿಯೊಬ್ಬರು ಆಯುಷ್ಮಾನ್ ಭಾರತ್  ಯೋಜನೆ ಸೌಲಭ್ಯ ಪಡೆದುಕೊಳ್ಳಬೇಕು- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

ದೇಶದ ಪ್ರತಿಯೊಬ್ಬರು ಆಯುಷ್ಮಾನ್ ಭಾರತ್  ಯೋಜನೆ ಸೌಲಭ್ಯ ಪಡೆದುಕೊಳ್ಳಬೇಕು- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್.

ಬೆಳಗಾವಿ ಮಾರ್ಚ್ 09, 2022(www.justkannada.in):  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಬೆಳಗಾವಿ ಜಿಲ್ಲೆಯ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಫಲಾನುಭವಿಗಳೊಂದಿಗೆ ಮಾತುಕತೆ ನಡೆಸಿ, ಚಹಾ ಸೇವಿಸಿದರು.

ಎಲ್ಲ ವರ್ಗದ ಜನರಿಗೆ ಉಚಿತ ಚಿಕಿತ್ಸೆ ಒದಗಿಸುವ ಮಹತ್ವಾಕಾಂಕ್ಷಿ ‘ಆಯುಷ್ಮಾನ್‌ ಭಾರತ್‌-ಆರೋಗ್ಯ ಕರ್ನಾಟಕ’ (ಎಬಿ-ಎಆರ್‌ಕೆ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ದೇಶದ ಪ್ರತಿಯೊಬ್ಬರು ಈ ಯೋಜನೆಯ ಸೌಲಭ್ಯವನ್ನು  ಪಡೆದುಕೊಳ್ಳುವಂತಾಗಬೇಕು. ಎಲ್ಲಾ ವರ್ಗದ ಸಾರ್ವಜನಿಕರಿಗೆ ಉತ್ತಮ ಚಿಕಿತ್ಸೆ ನೀಡಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಹೇಳಿದರು.

ಯೋಜನೆ ಬಗ್ಗೆ ಜಾಗೃತಿ ಮೂಡಿಸಿ ಸೂಕ್ತ ಮಾರ್ಗದರ್ಶನ ನೀಡುವುದು   ಪ್ರತಿಯೊಬ್ಬರ ಕರ್ತವ್ಯದ ಜೊತೆಗೆ, ಈ ಯೋಜನೆಯ ಫಲನುಭವಿಗಳು ಸಹ ಇದರಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಇನ್ನಿತರರಿಗೆ ಮಾಹಿತಿಯನ್ನು ಹಂಚಿಕೊಳ್ಳಬೇಕು. ಯಾವುದೇ ಫಲಾನುಭವಿಯು ಯೋಜನೆಯಿಂದ ವಂಚಿತರಾಗಬಾರದು ಎಂದು ಹೇಳಿದರು.

ಎ ಬಿ ಆರ್ ಕೆ ನೋಡಲ್ ಅಧಿಕಾರಿ ಚಾಂದನಿ ಬೆಳಗಾವಿ ಜಿಲ್ಲೆಯಲ್ಲಿ ಎಬಿ ಆರ್ ಕೆ ಯೋಜನೆ ಜಾರಿ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ನಂತರ ಅಲ್ಲಿ ನೆರೆದಿದ್ದವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಮಾಹಿತಿ ಭಿತ್ತಿಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ, ಗೌಡ ಆಯುಕ್ತರಾದ ಪ್ರೀತಂ ನಸಲಾಪುರೆ, ಜಿಲ್ಲಾ  ಆರೋಗ್ಯಾಧಿಕಾರಿ ಶಶಿಕಾಂತ್ ಮುನ್ಯಾಳ ಉಪಸ್ಥಿತರಿದ್ದರು.

Key words:  Ayushman Bharat- Scheme-Governor