Friday, September 18, 2026

BDA Apartments

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬಿಗಿ ಪೊಲೀಸ್ ಬಂದೋಬಸ್ತ್- ಬಿ.ದಯಾನಂದ್ BDA J...
Home Front Page ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬಿಗಿ ಪೊಲೀಸ್ ಬಂದೋಬಸ್ತ್- ಬಿ.ದಯಾನಂದ್

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬಿಗಿ ಪೊಲೀಸ್ ಬಂದೋಬಸ್ತ್- ಬಿ.ದಯಾನಂದ್

ಬೆಂಗಳೂರು ,ಜನವರಿ,24,2025 (www.justkannada.in): ಜನವರಿ 26 ರ  ‘ಗಣರಾಜ್ಯೋತ್ಸವಕ್ಕೆ’ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ ಎಂದು ಬೆಂಗಳೂರು ಕಮಿಷನರ್ ಬಿ.ದಯಾನಂದ್ ತಿಳಿಸಿದರು.ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ nypunya1

ಗಣರಾಜ್ಯೋತ್ಸವಕ್ಕೆ ಸಿದ್ದತೆ ಬಗ್ಗೆ ಮಾತನಾಡಿ ಮಾಹಿತಿ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್, ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಂದು ಬೆಳಿಗ್ಗೆ 9 ಗಂಟೆಗೆ  ಧ್ವಜಾರೋಹಣ ನೆರವೇರಿಸಲಿದ್ದಾರೆ. ಭದ್ರತೆಗಾಗಿ ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ನಗರದ ಎಲ್ಲಾ ವಿಭಾಗಗಳಿಂದ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. 8 ಡಿಸಿಪಿ, 17ಎಸಿಪಿ, 44 ಪಿಐ, 114 ಪಿಎಸ್‌ಐ, 185 ಎಎಸ್‌ ಐ, 80 ಮಹಿಳಾ ಸಿಬ್ಬಂದಿ 30 ಕ್ಯಾಮೆರಾ ಸಿಬ್ಬಂದಿಗಳು, 10 ಕೆ.ಎಸ್.ಆರ್.ಪಿ ತುಕಡಿ 2 ಅಗ್ನಿಶಾಮಕ ವಾಹನ, ಕ್ಷೀಪ್ರಕಾರ್ಯ ಪಡೆ, ಭದ್ರತೆಗಾಗಿ ಒಟ್ಟು 1,051 ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಮೈದಾನದ ಸುತ್ತಮುತ್ತ 103 ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಕೆ ಮಾಡಲಾಗಿದೆ ಎಂದು ಬಿ.ದಯಾನಂದ್ ಮಾಹಿತಿ ನೀಡಿದರು.

ಕಲರ್ ಕೋಡ್ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ವರಿಗೆ ಪಿಂಕ್ ಬಣ್ಣದ ಪಾಸ್ ವಿತರಣೆ ಮಾಡಲಾಗುತ್ತದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ವಿಐಪಿ ಗೇಟ್ 2ರಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಪಿಂಕ್ ಬಣ್ಣದ ಸೇರುವವರಿಗೆ ವಿಐಪಿ ಗೇಟ್ 2ರಲ್ಲಿ ಪ್ರವೇಶ ಕಲ್ಪಿಸಲಾಗುತ್ತದೆ.  ಮುಖ್ಯ ಅತಿಥಿ ಗಣ್ಯರಿಗೆ ಗೇಟ್ 3ರಲ್ಲಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ವೈಟ್ ಪಾಸ್ ಮಾಧ್ಯಮ ಪ್ರತಿನಿಧಿಗಳಿಗೆ ಗೇಟ್ 4ರಲ್ಲಿ ಪ್ರವೇಶ ಕಲ್ಪಿಸಲಾಗಿದೆ ದಯಾನಂದ್ ತಿಳಿಸಿದರು.

Key words: preparations, Republic Day, Bangalore, police, Commissioner, B. Dayanand