ಬೆಂಗಳೂರು,ಜುಲೈ,14,2025 (www.justkannada.in): ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಹುಭಾಷಾ ಹಿರಿಯ ನಟಿ ಬಿ.ಸರೋಜಾ ದೇವಿ(87) ಇಂದು ನಿಧನರಾಗಿದ್ದಾರೆ.
ವಯೋಸಜಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಲ್ಲೇಶ್ವರಂನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿರುವ ಸರೋಜಾದೇವಿ ಅವರು ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಸರೋಜಾದೇವಿ ಅವರಿಗೆ 19 69ರಲ್ಲಿ ಪದ್ಮಶ್ರೀ 1992ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿ ಸಂದಿವೆ. ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದ್ದರು.
Key words: Veteran actress, B. Saroja Devi, no more.