ಹಿರಿಯ ನಟಿ ಬಿ.ಸರೋಜಾ ದೇವಿ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,15,2025 (www.justkannada.in): ನಿನ್ನೆ ವಯೋಸಹಜ ಖಾಯಿಲೆಯಿಂದ ನಿಧನರಾದ ಬಹುಭಾಷಾ ಹಿರಿಯ ನಟಿ ಸರೋಜಾದೇವಿ ಅವರಿಗೆ ಸಿಎಂ ಸಿದ್ದರಾಮಯ್ಯ ಇಂದು  ಅಂತಿನ ನಮನ ಸಲ್ಲಿಸಿದರು.

ಇಂದು ಮಲ್ಲೇಶ್ವರಂನನಿವಾಸಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು  ಬಿ.ಸರೋಜಾ ದೇವಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಬಹಳ ಚಿಕ್ಕ ವಯಸ್ಸಿನಲ್ಲೇ ಅವರು ಚಿತ್ರರಂಗ ಪ್ರವೇಶ ಮಾಡಿದ್ದರು. ಕನ್ನಡ ಚಲನಚಿತ್ರರಂಗ ಬೆಳೆಯಲು ಸರೋಜಾದೇವಿ ಕೊಡುಗೆ ಅಪಾರ. ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ ಎಂದರು.vtu

Key words: CM, Siddaramaiah, veteran actress, B. Saroja Devi