ಜ.22ರಂದು ರಜೆ ಘೋಷಿಸುವಂತೆ ಸರ್ಕಾರಕ್ಕೆ ಬಿ.ವೈ ವಿಜಯೇಂದ್ರ ಆಗ್ರಹ.

ಬೆಂಗಳೂರು, ಜನವರಿ 20,2024(www.justkannada.in): ಜನವರಿ 22 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿನ ಪ್ರಾಣ ಪ್ರತಿಷ್ಠೆ ಸಮಾರಂಭ ಹಿನ್ನೆಲೆ ಅಂದು ರಾಜ್ಯದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,  ಜನವರಿ 22 ರಂದು ರಾಜ್ಯ ಸರ್ಕಾರ ಸರ್ಕಾರಿ ರಜೆ ಘೋಷಣೆ ಮಾಡಿ ರಾಮ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು. ಈಗಾಗಲೇ ಹಲವು ರಾಜ್ಯಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕೂಡ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಹಾಗಾಗಿ ರಾಜ್ಯದಲ್ಲೂ ರಜೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ರಾಮಭಕ್ತರಿಗೆ ಸಮಸ್ಯೆಯಾಗದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು. ಏನಾದರೂ ಕಾನೂನು ಸುವ್ಯವಸ್ಥೆ ಸಮಸ್ಯೆಯಾದರೆ ಕಾಂಗ್ರೆಸ್ ಹೊಣೆಯಾಗುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಎಚ್ಚರಿಕೆ ನೀಡಿದರು.

ಕರ್ನಾಟಕದಿಂದ ಅಯೋಧ್ಯೆಗೆ ಜನವರಿ 22ರ ಬಳಿಕ 60 ದಿನಗಳ ಅವಧಿಯಲ್ಲಿ 35 ಸಾವಿರಕ್ಕೂ ಹೆಚ್ಚು ರಾಮ ಭಕ್ತರು ಪ್ರಯಾಣಿಸಲಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.

Key words: B.Y. Vijayendra – government -declare -holiday – Jan 22.