‘ಕುಶ ಆನೆ’ ಮರಳಿ ಕಾಡಿಗೆ:  ಅರಣ್ಯ ಸಚಿವ ಅರವಿಂದ ಲಿಂಬಾವಳಿ ಆದೇಶ…

ಬೆಂಗಳೂರು,ಏಪ್ರಿಲ್ 28,2021(www.justkannada.in): ಅರಣ್ಯ ಇಲಾಖೆ ಸೆರೆಹಿಡಿದಿದ್ದ ದುಬಾರೆ ಅರಣ್ಯ ಪ್ರದೇಶದ ಆನೆ ಕುಶನನ್ನು ಮರಳಿ ಕಾಡಿಗೆ ಬಿಡಲು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಆದೇಶಿಸಿದ್ದಾರೆ.jk

ಇಂದು ಈ ಸಂಬಂಧ ಸಚಿವ ಅರವಿಂದ ಲಿಂಬಾವಳಿ ತಮ್ಮ ಕಚೇರಿಯಲ್ಲಿ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಳೆದ ಒಂದು ವರ್ಷದಿಂದ ದುಬಾರೆ ಶಿಬಿರದಿಂದ ತಪ್ಪಿಸಿಕೊಂಡ ಆನೆ ಕುಶ ನನ್ನು ಸೆರೆ ಹಿಡಿದು ತರಲಾಗಿತ್ತು, ಆದರೆ ಕುಶ ಆನೆಯನ್ನು ಸೆರೆ ಹಿಡಿದು ಇಲಾಖೆಯಿಂದ ಹಿಂಸೆ ನೀಡಲಾಗುತ್ತಿದೆ ಎಂದು  ಪ್ರಾಣಿಪ್ರಿಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಇಂದು ಸಭೆ  ನಡೆಸಿ ಮಾಹಿತಿ ಪಡೆದರು. ಅಧಿಕಾರಿಗಳು ಕುಶ ಆನೆಗೆ ಯಾವುದೇ ತರಹದ ಹಿಂಸೆ ನೀಡಿಲ್ಲ‌. ಕುಶ ಆನೆ ಆರೋಗ್ಯವಾಗಿದೆ ಎಂದು  ಮಾಹಿತಿ ನೀಡಿದರು.

ಅಂತಿಮವಾಗಿ ಸಚಿವರು ಕುಶ ಆನೆಗೆ ರೋಡಿಯೋ ಕಾಲರ್ ಅಳವಡಿಸಿ, ಬಿಡುಗಡೆ ಮಾಡಲು ಬಿಡುಗಡೆಗೆ ಸೂಕ್ತ ಸ್ಥಳ ನಿಗದಿ ಪಡಿಸಿದ ಮೇಲೆ, ಎಲ್ಲಾ  ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಬಿಡುಗಡೆ ಮಾಡಲು ಆದೇಶಿಸಿದರು.

ಇದೇ ಸಂದರ್ಭದಲ್ಲಿ ದುಬಾರೆ ಸಮೀಪ ಪ್ರಜ್ಞಾ ಚೌಟ ಎನ್ನುವವರು  ಆನೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡು ಪೋಷಿಸುತ್ತಿರುವ ಬಗ್ಗೆ ಸ್ಥಳೀಯರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಬಗ್ಗೆ ಚರ್ಚೆ ನಡೆಸಲಾಯಿತು.  ಅವರ ಸುಪರ್ದಿಯಲ್ಲಿರುವ ಆನೆಗಳನ್ನು ಇಲಾಖೆಯ ವಶಕ್ಕೆ ಪಡೆಯುವ ಬಗ್ಗೆ ಸಚಿವ ಅರವಿಂದ ಲಿಂಬಾವಳೀ ಅಧಿಕಾರಿಗಳೊಂದಿಗೆ ಚರ್ಚಿಸಿದರು.Back – forest-kusha elephant-Forest Minister- Arvind Limbavali -ordered.

ಸಭೆಯಲ್ಲಿ ಸಂಜಯ್ ಮೋಹನ್. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಪಡೆ ಮುಖ್ಯಸ್ಥರು ಮತ್ತು  ವಿಜಯಕುಮಾರ್ ಗೋಗಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ,) ಹಾಗೂ ವನ್ಯಜೀವಿ ಪರಿಪಾಲಕರು ಭಾಗವಹಿಸಿದ್ದರು.

ENGLISH SUMMARY…..

Kusha to be returned to forest: Minister Arvind Limbavali

Bengaluru, April 28: Kodagu Dubare camp elephant Kusha, which had been captured by Forest Department staff, will be returned to the forests, said Forest and Kannada and Culture Minister Arvind Limbavali has said.

He held a meeting with Forest Department senior officers regarding the matter at his office on Wednesday.Back – forest-kusha elephant-Forest Minister- Arvind Limbavali -ordered.

The elephant, which had escaped from the camp a year ago, had been recaptured, but animal lovers had been complaining that the elephant was being tortured by the Forest Department officers. Calling a meeting following the complaints, Arvind Limbavali called a meeting and confirmed from the forest officers that the elephant Kusha was not being ill-treated.

The minister instructed the officers to fix a rodeo collar on the elephant and let it into the jungle once a suitable place is identified. He also told the officers to take necessary safety steps for the work.

Arvind Limbavali was informed that Prajna Chowta, who lives near Dubare camp, had been taking care of elephants at her place and that the local residents had raised objection to this. In the backdrop of development, the minister directed the forest department to take over 7 elephants including 5 calf’s which was under the care of Prajna Chowta .

Sanjay Mohan, PCCF (Head of forest force), Vijaykumar Gogi, PCCF (Wildlife), and wildlife curators attended the meeting.

Key words: Back – forest-kusha elephant-Forest Minister- Arvind Limbavali -ordered.