ಕಾಂಗ್ರೆಸ್ ವಿರುದ್ಧ ಮುಂದುವರೆದ ವಾಗ್ದಾಳಿ: ಸಿದ್ಧರಾಮಯ್ಯ ಬಗ್ಗೆ ವ್ಯಂಗ್ಯವಾಡಿದ ಪ್ರಧಾನಿ ಮೋದಿ.

ಬಾಗಲಕೋಟೆ,ಮೇ,6,2023(www.justkannada.in): ರಾಜ್ಯವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲೇ ಬೀಡುಬಿಟ್ಟು ರೋಡ್ ಶೋ ಮೂಲಕ ಮತದಾರರನ್ನ ಸೆಳೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇದೀಗ ಕಾಂಗ್ರೆಸ್ ವಿರುದ್ದ ವಾಗ್ದಾಳಿಯನ್ನ ಮುಂದುವರೆಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಜನರ ಭಾವನೆಗಳು ಏನು ಎಂಬುದು ಸಿದ್ದರಾಮಯ್ಯ ಅವರಿಗೆ ಅರ್ಥವಾಗಿದೆ. ಅದೇ ಕಾರಣಕ್ಕೆ ಮತ್ತೊಂದು ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಗೆಲ್ಲಿಸಿರುವ ಜನರನ್ನು ತಿರಸ್ಕರಿಸಿ ಅವರು ಓಡಿ ಹೋಗಿದ್ದಾರೆ. ತಮ್ಮನ್ನು ಗೆಲ್ಲಿಸಿದ ಜನರನ್ನು ತಿರಸ್ಕರಿಸಿ ಸಿದ್ಧರಾಮಯ್ಯ ಓಡಿಹೋಗಿದ್ದಾರೆ. ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ವ್ಯಂಗ್ಯವಾಡಿದರು.

ಅಭಿವೃದ್ಧಿಯಲ್ಲಿ ದೇಶದಲ್ಲೇ ಕರ್ನಾಟಕ ನಂಬರ್​ 1 ಮಾಡುವ ಗುರಿಯಿದೆ. ಇದಕ್ಕಾಗಿ ಬಿಜೆಪಿಗೆ ಆಶೀರ್ವಾದಿಸಲು ಕೋರುವೆ. ಬಿಜೆಪಿಗೆ ಜನರ ಬೆಂಬಲ ಸಹಿಸಲಾಗದೆ ಕಾಂಗ್ರೆಸ್​ನವರು ಬೈಯ್ಯುತ್ತಿದ್ದಾರೆ. ಕಾಂಗ್ರೆಸ್​ನವರು ನನಗೆ, ಬಿಜೆಪಿಗೆ ಬೈದಷ್ಟು ಕಮಲ ಅರಳಲಿದೆ. ಕಾಂಗ್ರೆಸ್ ಪಕ್ಷದಿಂದ ತುಷ್ಟೀಕರಣ ರಾಜಕಾರಣ ಮುಂದುವರಿದಿದೆ. ಆದರೆ, ಕೇಂದ್ರ ಸರ್ಕಾರದ ಯೋಜನೆಗಳು ಜನಪರವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಬಾದಾಮಿ ಬಳಿಕ ಹಾವೇರಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್​ನ ತುಷ್ಟೀಕರಣದಿಂದ ಕರ್ನಾಟಕ ಯಾವುದೇ ಅಭಿವೃದ್ಧಿ ಲಿಂಗಾಯತ, ಹಿಂದುಳಿದ ವರ್ಗದ ಜನರು ಸಿಟ್ಟಿನಲ್ಲಿ ಇದ್ದಾರೆ. ಚುನಾವನೆಯಲ್ಲಿ ಕಾಂಗ್ರೆಸ್​ಗೆ ತಕ್ಕ ಪಾಠ ಕಲಿಸಲು ಕಾಯುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಸುಳ್ಳು ಗ್ಯಾರಂಟಿ ಘೋಷಿಸಿ ಅಧಿಕಾರಕ್ಕೆ ಬಂದರು. ಆದರೆ ಸರ್ಕಾರ ರಚಿಸಿದ ಮೇಲೆ ಯಾವುದೇ ಘೋಷಣೆ ಈಡೇರಿಸಿಲ್ಲ ಎಂದು ಟೀಕಿಸಿದರು.

Key words: Badami-Haveri-PM Modi- Congress-Siddaramaiah.