ಬಿಜೆಪಿ ಸೇರಿದ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್

ಬೆಂಗಳೂರು, ಜನವರಿ 30, 2019 (www.justkannada.in): ಭಾರತದ ಖ್ಯಾತ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್ ತಮ್ಮ ಸಹೋದರಿ ಚಂದ್ರಾಂಶು ಜೊತೆ ಭಾರತೀಯ ಜನತಾ ಪಕ್ಷ ಸೇರಿದ್ದಾರೆ.

ವಿಶ್ವ ಬ್ಯಾಡ್ಮಿಂಟನ್ ಲೋಕದಲ್ಲಿ ವಿಶಿಷ್ಠ ಸಾಧನೆ ತೋರಿರುವವರು ಹೈದರಾಬಾದ್‌ ಮೂಲದ ಸೈನಾ ನೆಹ್ವಾಲ್. ದೆಹಲಿಯ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದ್ದಾರೆ. ಪಕ್ಷದ ನಾಯಕರು ಇಬ್ಬರಿಗೂ ಕೇಸರಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಸೈನಾ ನೆಹ್ವಾಲ್ (29) ಬ್ಯಾಡ್ಮಿಂಟನ್ ಆಟದಲ್ಲಿ 24 ಕ್ಕೂ ಹೆಚ್ಚು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿಯೇ ಅವರು ಜಿಜೆಪಿ ಪಕ್ಷಕ್ಕೆ ಸೇರಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ.