Thursday, August 13, 2026

BDA Apartments

Home Front Page ಮುಧೋಳ ಪರಿಹಾರ ಕೇಂದ್ರಕ್ಕೆ ಭೇಟಿ : ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ..

ಮುಧೋಳ ಪರಿಹಾರ ಕೇಂದ್ರಕ್ಕೆ ಭೇಟಿ : ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ..

ಬಾಗಲಕೋಟೆ,ಆ,9,2019(www.justkannada.in): ಭಾರಿ ಮಳೆಯಿಂದಾಘಿ ಜಲಾವೃತಗೊಂಡಿರುವ  ಬಾಗಲಕೋಠೆ ಜಿಲ್ಲೆಯ ಮುಧೋಳದ  ಪ್ರದೇಶಗಳಿಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಮುಧೋಳ ಸಂತ್ರಸ್ತ ಪರಿಹಾರ ಕೇಂದ್ರಕ್ಕೂ ಸಹ ಭೇಟಿ ನೀಡಿ ಸಂತ್ರಸ್ತರ ಕುಂದು ಕೊರತೆಗಳನ್ನು ಆಲಿಸಿದರು. ಈ ವೇಳೆ ನಿರಾಶ್ರಿತ ಮಹಿಳೆಯರ ಜತೆ ಮಾತುಕತೆ ನಡೆಸಿದರು. ಹಾಗೆಯೇ ನಿಮ್ಮ ಜತೆ ಸರ್ಕಾರವಿದೆ. ನಿಮಗೆ ಪರಿಹಾರ ನೀಡುವ ಜವಾಬ್ದಾರಿ ನನ್ನದು ಎಂದು ಸಂತ್ರಸ್ತರಿಗೆ ಬಿಎಸ್ ವೈ ಭರವಸೆ ನೀಡಿದರು.

ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕದ ಪ್ರವಾಹಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸುತ್ತಿದ್ದಾರೆ. ನಿನ್ನೆ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಮುಧೋಳ ತಾಲ್ಲೂಕು ಮಳಲಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿ ಸಾಂತ್ವನ ಹೇಳಿದ್ದರು.

Key words: bagalakote-Visit – Relief –Center-CM BS Yeddyurappa, – courageous – victims.