ಮಾಜಿ ಸಚಿವ ಡಿ,ಕೆ ಶಿವಕುಮಾರ್ ಗೆ ಜಾಮೀನು ಸಿಕ್ಕ ಹಿನ್ನೆಲೆ: ಮೈಸೂರಿನಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಅಭಿಮಾನಿಗಳಿಂದ ಸಂಭ್ರಮಾಚರಣೆ…

ಮೈಸೂರು,ಅ,24,2019(www.justkannada.in): ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಬಂಧಿತರಾಗಿ ಸುಮಾರು 50 ದಿನಗಳ ಕಾಲ ಜೈಲುವಾಸ ಅನುಭವಿಸಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ  ಜಾಮೀನು ಸಿಕ್ಕ ಹಿನ್ನಲೆ ಇಂದು ಸಹ ಮೈಸೂರಿನಲ್ಲಿ ಡಿಕೆಶಿ ಅವರ ಅಭಿಮಾನಿಗಳಿಂದ ಸಂಭ್ರಮಾಚರಣೆ ಮುಂದುವರೆದಿದೆ.

ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ಇರುವ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯದಲ್ಲಿ  ಮಾಜಿ ಸಚಿವ ಡಿಕೆ ಶಿವಕುಮಾರ್ ಹೆಸರಿನಲ್ಲಿ  ಅಭಿಮಾನಿಗಳು ಪೂಜೆ ಸಲ್ಲಿಕೆ ಮಾಡಿದರು. ಮಾಜಿ ಪಾಲಿಕೆ ಸದಸ್ಯ ಪ್ರಶಾಂತ್ ಗೌಡ ನೇತೃತ್ವದಲ್ಲಿ ಪೂಜೆ ಸಲ್ಲಿಕೆ ಮಾಡಿ ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು. ಹಾಗೆಯೇ ಡಿಕೆ ಶಿವಕುಮಾರ್ ಪರ ಘೋಷಣೆ ಕೂಗಿ ಭಿಮಾನಿಗಳು ಸಂಭ್ರಮಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಡಿಯಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ನಿನ್ನೆ ನವದಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

Key words: Bail – former minister- D, K Sivakumar -celebration -Mysore