Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Crime ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು

ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು, ಆಗಸ್ಟ್,21,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ  ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು.ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು bail

ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಸಮೀರ್  ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಮೀರ್ ಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಬಂಧನ ಭೀತಿಯಿಂದ ಪಾರಾಗಿದ್ದಾರೆ.

Key words: Dharmasthala case, Bail, granted, YouTuber, MD Sameer