ಸಿಲಿಂಡರ್ ಸ್ಪೋಟ: ತಾಯಿ ಮಗಳು ಸ್ಥಳದಲ್ಲೇ ಸಜೀವದಹನ…

ಬಳ್ಳಾರಿ,ಜ,6,2020(www.justkannada.in):  ಅಡುಗೆ ಮಾಡುವ ವೇಳೆ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡು ತಾಯಿ ಮಗಳು ಸಜೀವದಹನವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ತಾಲ್ಲೂಕಿನ ಸಂಜೀವರಾಯನ ಕೋಟೆಯಲ್ಲಿ ಈ ಘಟನೆ ನಡೆದಿದೆ. ತಾಯಿ ಪಾರ್ವತಿ ಮಗಳು ಹುಲಿಗೆಮ್ಮ ಮೃತಪಟ್ಟವರು. ಮನೆಯಲ್ಲಿ ಅಡುಗೆ ಮಾಡುವ ಸಂದರ್ಭದಲ್ಲಿ ಅನಿಲ ಸೋರಿಕೆಯಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸಿಲಿಂಡರ್ ಸ್ಪೋಟದ ತೀವ್ರತೆಗೆ ತಾಯಿ ಮಗಳು ಸುಟ್ಟುಕರಕಲಾಗಿದ್ದು  ಮನೆಯಲ್ಲಿನ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಬಳ್ಳಾರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

Key words: ballari  Cylinder- explosion-mother- daughter -burn