ಬಳ್ಳಾರಿ ಗಲಾಟೆ ಕೇಸ್: 26 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಂಗಳೂರು,ಜನವರಿ,5,2026 (www.justkannada.in):  ಬಳ್ಳಾರಿಯಲ್ಲಿ ಬ್ಯಾನರ್ ಹಾಕುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಪ್ರಕರಣ ಸಂಬಂಧ 26 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 26 ಆರೋಪಿಗಳನ್ನ ಹಾಜರುಪಡಿಸಿದ್ದರು. ಆದರೆ ಪೊಲೀಸರು ತಮ್ಮ ಕಸ್ಟಡಿಗೆ ಕೇಳಿಲ್ಲ ಎನ್ನಲಾಗಿದೆ.

ಇದೀಗ ಆರೋಪಿಗಳನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

Key words: Ballari, riot case, 26 accused, judicial custody